Download Our App

Follow us

Home » ಕ್ರೀಡೆ » ವಿಶ್ವಕಪ್ ವಿಜೇತ ಟೀಂ ಇಂಡಿಯಾಗೆ 125 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ..!

ವಿಶ್ವಕಪ್ ವಿಜೇತ ಟೀಂ ಇಂಡಿಯಾಗೆ 125 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ..!

ನವದೆಹಲಿ : 2024ರ ಟಿ20 ವಿಶ್ವಕಪ್‌ ಚಾಂಪಿಯನ್​ ಆಗಿ ಹೊರಹೊಮ್ಮಿರುವ ಭಾರತ ಕ್ರಿಕೆಟ್​ ತಂಡಕ್ಕೆ 125 ಕೋಟಿ ರೂಪಾಯಿಗಳ ಬಹುಮಾನವನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಘೋಷಿಸಿದ್ದಾರೆ. ಇಡೀ ಟೀಂ ಇಂಡಿಯಾದ ಆಟಗಾರರು ಹಾಗೂ ಸಿಬ್ಬಂದಿಯನ್ನೂ ಅವರು ಹಾಡಿ ಹೊಗಳಿದ್ದಾರೆ.

ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿ ಶನಿವಾರ ನಡೆದ ಟಿ-20 ವಿಶ್ವಕಪ್‌ ಫೈನಲ್‌ನಲ್ಲಿ ಭಾರತವು ದಕ್ಷಿಣ ಆಫ್ರಿಕಾ ತಂಡವನ್ನು ಏಳು ರನ್‌ಗಳಿಂದ ಸೋಲಿಸಿದೆ. ಈ ಮೂಲಕ ಟಿ-20 ವಿಶ್ವಕಪ್​ನ ಎರಡನೇ ಪ್ರಶಸ್ತಿಗೆ ಮುತ್ತಿಕ್ಕಿದೆ. ಟೀಂ ಇಂಡಿಯಾದ ಸಾಧನೆಯನ್ನು ಶ್ಲಾಘಿಸಿರುವ ಜಯ್ ಶಾ, ಐಸಿಸಿ ಪುರುಷರ ಟಿ-20 ವಿಶ್ವಕಪ್ 2024 ಗೆದ್ದ ಟೀಂ ಇಂಡಿಯಾಗೆ 125 ಕೋಟಿಗಳ ಬಹುಮಾನದ ನಗದು ಹಣವನ್ನು ಘೋಷಿಸಲು ನನಗೆ ಸಂತೋಷವಾಗಿದೆ ಎಂದು ತಿಳಿಸಿದ್ದಾರೆ.

ತಂಡವು ಪಂದ್ಯಾವಳಿಯ ಉದ್ದಕ್ಕೂ ಅಸಾಧಾರಣ ಪ್ರತಿಭೆ, ದೃಢತೆ ಮತ್ತು ಕ್ರೀಡಾ ಮನೋಭಾವವನ್ನು ಪ್ರದರ್ಶಿಸಿದೆ. ಈ ಅತ್ಯುತ್ತಮ ಸಾಧನೆಗಾಗಿ ಎಲ್ಲ ಆಟಗಾರರು, ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿಗೆ ಅಭಿನಂದನೆಗಳು ಎಂದು ಬಿಸಿಸಿಐ ಕಾರ್ಯದರ್ಶಿ ಸಾಮಾಜಿಕ ಜಾಲತಾಣ ‘ಎಕ್ಸ್​’ನಲ್ಲಿ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ : ವಿಶ್ವಕಪ್ ಗೆಲ್ಲಿಸಿಕೊಟ್ಟು ಹೆಡ್​​ಕೋಚ್ ಇನ್ನಿಂಗ್ಸ್​ಗೆ ವಿದಾಯ ಹೇಳಿದ ಕನ್ನಡದ ಕಣ್ಮಣಿ ರಾಹುಲ್ ದ್ರಾವಿಡ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here