Download Our App

Follow us

Home » ಜಿಲ್ಲೆ » ಹಾವೇರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ – ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ, 13 ಮಂದಿ ಸಾವು..!

ಹಾವೇರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ – ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ, 13 ಮಂದಿ ಸಾವು..!

ಹಾವೇರಿ : ರಾಜ್ಯದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಹಾವೇರಿಯಲ್ಲಿ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಹಿಂಬದಿಯಿಂದ ಲಾರಿಗೆ ಟಿಟಿ ವಾಹನವೊಂದು ಡಿಕ್ಕಿಯಾಗಿ 13 ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್​ ಬಳಿ ನಡೆದಿದೆ.

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಟಿಟಿ ವಾಹನ ಸಂಪೂರ್ಣ ಜಖಂ ಆಗಿದೆ. ಮೃತರು ಸವದತ್ತಿ ಯಲ್ಲಮ್ಮನ ದರ್ಶನಕ್ಕೆಂದು ತೆರಳಿದ್ದರು. ದೇವರ ದರ್ಶನ ಮುಗಿಸಿ ವಾಪಸ್ ಬರುವಾಗ ದುರ್ಘಟನೆ ಸಂಭವಿಸಿದೆ. ಮೃತರೆಲ್ಲರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಎಮ್ಮಿಹಟ್ಟಿಯವರು ಎಂದು ತಿಳಿದು ಬಂದಿದೆ.

ಬೆಳಗಿನ ಜಾವ 3.30ರ ಸುಮಾರಿಗೆ ಅಪಘಾತ ನಡೆದಿದ್ದು, ನಜ್ಜುಗುಜ್ಜಾದ ಟಿಟಿ ವಾಹನದಲ್ಲಿ ಮೃತದೇಹಗಳು ಸಿಲುಕಿದ್ದವು. ಅಗ್ನಿಶಾಮಕ ಸಿಬ್ಬಂದಿ ಸಹಾಯದೊಂದಿಗೆ ಪೊಲೀಸರು ಮೃತದೇಹಗಳನ್ನು ಹೊರತಗೆದಿದ್ದಾರೆ. ಬ್ಯಾಡಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ : “ರೂಪಾಂತರ”ಗೊಂಡ ರಾಜ್ ಬಿ. ಶೆಟ್ಟಿ – ಶೀಘ್ರವೇ ‘ಒಂದು ಮೊಟ್ಟೆಯ ಕಥೆ’ ಬಳಗದೊಂದಿಗೆ ಶೆಟ್ರ ಆಗಮನ..!

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here