ಬೆಂಗಳೂರು : ಜೀವ ಬೆದರಿಕೆ, ಜಾತಿ ನಿಂದನೆ ಕೇಸ್‌ನಲ್ಲಿ ಅರೆಸ್ಟ್ ಆಗಿರುವ ಶಾಸಕ ಮುನಿರತ್ನರನ್ನು ಇಂದು 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುಂದೆ ಪೊಲೀಸರು ಹಾಜರುಪಡಿಸಿದ್ದರು. ಇದೀಗ MLA ಮುನಿರತ್ನಗೆ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಮುನಿರತ್ನ ಅವರಿಗೆ ಇಂದು ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆ ಅವರನ್ನು ಕೋರ್ಟ್ಗೆ ಹಾಜರುಪಡಿಸಿದ್ದರು. ವಿಚಾರಣೆ ಬಳಿಕ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ನೀಡಿ ಆದೇಶ ಹೊರಡಿಸಿದೆ.
ಜಾತಿ ನಿಂದನೆ, ಜೀವ ಬೆದರಿಕೆ ಕೇಸಲ್ಲಿ ಅರೆಸ್ಟ್ ಆಗಿರುವ ಮುನಿರತ್ನ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ನಾಳೆ ಜನಪ್ರತಿನಿಧಿಗಳ ಕೋರ್ಟ್ನಲ್ಲಿ ಬೇಲ್ ಅರ್ಜಿ ವಿಚಾರಣೆ ನಡೆಯಲಿದೆ.
ಇದನ್ನೂ ಓದಿ : ಸೆ.30ರವರೆಗೂ ಜೈಲಲ್ಲೇ ದರ್ಶನ್ ಗ್ಯಾಂಗ್ - ಸತತ ಏಳನೇ ಬಾರಿ ನ್ಯಾಯಾಂಗ ಬಂಧನ ವಿಸ್ತರಣೆ..!
Post Views: 16