Download Our App

Follow us

Home » ಸಿನಿಮಾ » ಇಂದ್ರಜಿತ್ ಲಂಕೇಶ್ ನಿರ್ದೇಶನದ ‘ಮೊನಾಲಿಸಾ’ ಚಿತ್ರಕ್ಕೆ 20 ವರ್ಷಗಳ ಸಂಭ್ರಮ : ರಿಲೀಸ್ ಆಯ್ತು ‘ಗೌರಿ’ ಚಿತ್ರದ 2 ಹಾಡುಗಳು..!

ಇಂದ್ರಜಿತ್ ಲಂಕೇಶ್ ನಿರ್ದೇಶನದ ‘ಮೊನಾಲಿಸಾ’ ಚಿತ್ರಕ್ಕೆ 20 ವರ್ಷಗಳ ಸಂಭ್ರಮ : ರಿಲೀಸ್ ಆಯ್ತು ‘ಗೌರಿ’ ಚಿತ್ರದ 2 ಹಾಡುಗಳು..!

2004ರಲ್ಲಿ ತೆರೆಗೆ ಬಂದ ಬ್ಲಾಕ್ ಬಸ್ಟರ್ ಸಿನಿಮಾ ‘ಮೊನಾಲಿಸಾ’. ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಮೂಡಿಬಂದ ‘ಮೊನಾಲಿಸಾ’ ಚಿತ್ರದಲ್ಲಿ ಧ್ಯಾನ್ ಹಾಗೂ ಸದಾ ಪ್ರಮುಖ ಪಾತ್ರಗಳಲ್ಲಿ ಮಿಂಚಿದ್ದರು. ‘ಮೊನಾಲಿಸಾ’ ಚಿತ್ರ ರಿಲೀಸ್ ಆಗಿ ಬರೋಬ್ಬರಿ ಇಪ್ಪತ್ತು ವರ್ಷಗಳು ತುಂಬಿವೆ.

‘ಮೊನಾಲಿಸಾ’ ಚಿತ್ರಕ್ಕೆ ಇಪ್ಪತ್ತು ವರ್ಷಗಳು ತುಂಬಿದ ಸಂಭ್ರಮವನ್ನ ಚಿತ್ರತಂಡ ಸೆಲೆಬ್ರೇಟ್​ ಮಾಡಿದೆ. ನಾಯಕ ನಟ ಧ್ಯಾನ್, ನಾಯಕಿ ಸದಾ ಜೊತೆಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಕೇಕ್ ಕಟ್ ಮಾಡಿ ‘ಮೊನಾಲಿಸಾ’ ಚಿತ್ರದ ಇಪ್ಪತ್ತರ ಸಂಭ್ರಮವನ್ನ ಆಚರಿಸಿದ್ದಾರೆ. ಈ ವೇಳೆ ನಟ ಶರಣ್, ಸಂಭಾಷಣೆಕಾರ ಬಿಎ ಮಧು, ಡಿಸೈನರ್ ಮಣಿ ಸೇರಿದಂತೆ “ಮೊನಾಲಿಸ” ಚಿತ್ರತಂಡದ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

‘ಮೊನಾಲಿಸಾ’ ಚಿತ್ರದ ಇಪ್ಪತ್ತು ವರ್ಷಗಳ ಸಂಭ್ರಮಾಚರಣೆ ವೇಳೆ ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಅವರ ಮಗ ಸಮರ್ಜಿತ್ ಲಂಕೇಶ್ ನಾಯಕನಾಗಿ ಪದಾರ್ಪಣೆ ಮಾಡುತ್ತಿರುವ ‘ಗೌರಿ’ ಚಿತ್ರದ “ಮುದ್ದಾದ” ಹಾಡು ಸೇರಿದಂತೆ ಎರಡು ಹಾಡುಗಳು ಬಿಡುಗಡೆಯಾದವು. ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ‘ಗೌರಿ’ ಹಾಡನ್ನು ಬಿಡುಗಡೆ ಮಾಡಿದರು. ಈ ಹಾಡನ್ನು ಇಂದ್ರಜಿತ್ ಅವರ ಸಹೋದರಿ ಗೌರಿ ಲಂಕೇಶ್ ಅವರಿಗೆ ಅರ್ಪಿಸಲಾಯಿತು. “ಮುದ್ದಾದ” ಹಾಡನ್ನು ‘ಮೊನಾಲಿಸಾ’ ಚಿತ್ರದ ನಾಯಕ ಧ್ಯಾನ್, ನಾಯಕಿ ಸದಾ ಹಾಗೂ ‘ಗೌರಿ’ ಚಿತ್ರದ ನಾಯಕ ಸಮರ್ಜಿತ್ ಹಾಗೂ ನಾಯಕಿ ಸಾನ್ಯ ಅಯ್ಯರ್ ಸೇರಿ ಬಿಡುಗಡೆ ಮಾಡಿದರು. ”ಗೌರಿ” ಹಾಡನ್ನು ಕೆ ಕಲ್ಯಾಣ್ ಹಾಗೂ “ಮುದ್ದಾದ” ಹಾಡನ್ನು ಕವಿರಾಜ್ ಬರೆದಿದ್ದಾರೆ. ಆನಂದ್ ಆಡಿಯೋ ಮೂಲಕ ಹಾಡುಗಳು ಬಿಡುಗಡೆಯಾಗಿವೆ.

ಹಾಡು ಬಿಡುಗಡೆ ಮಾಡಿ ಹಂಸಲೇಖ ಅವರು ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. “ಸಂಗೀತ ಎಂದರೆ ಸಿನಿಮಾ. ಸಿನಿಮಾ ಎಂದರೆ ಸಂಗೀತ. ಸಂಗೀತವಿಲ್ಲದ ಸಿನಿಮಾವನ್ನು ಊಹಿಸಿಕೊಳ್ಳಲು ಅಸಾಧ್ಯ. ಸ್ಟೈಲಿಶ್ ಚಿತ್ರಗಳಿಗೆ ಹೆಸರಾದ ಇಂದ್ರಜಿತ್ ಅವರು ಈ ಚಿತ್ರವನ್ನೂ ನಿರ್ದೇಶಿಸಿದ್ದಾರೆ. ತಮ್ಮ ನಿರ್ದೇಶನದಲ್ಲೇ ಮಗನನ್ನು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿಸುತ್ತಿದ್ದಾರೆ. ಇಂದು ನನ್ನಿಂದ ಬಿಡುಗಡೆಯಾದ ಹಾಡನ್ನು ಗೌರಿ ಲಂಕೇಶ್ ಅವರಿಗೆ ಅರ್ಪಿಸಿದ್ದಾರೆ. “ಗೌರಿ” ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.

ಇನ್ನು ಈ ಸಂಭ್ರಮದ ಸಂದರ್ಭದಲ್ಲಿ ಇಂದ್ರಜಿತ್ ಲಂಕೇಶ್ ಅವರು ”ಗೌರಿ” ಚಿತ್ರದ ಬಗ್ಗೆ ಮಾತನಾಡಿದ್ದಾರೆ. “ಗೌರಿ’ ಚಿತ್ರದಲ್ಲಿ ಏಳು ಹಾಡುಗಳಿವೆ. ಇದೊಂದು ಸಂಗೀತ ಪ್ರಧಾನ ಚಿತ್ರವಾಗಿರುವುದರಿಂದ ಹಂಸಲೇಖ ಅವರಿಂದಲೇ ಹಾಡು ಬಿಡುಗಡೆ ಮಾಡಿಸಬೇಕೆಂಬ ಹಂಬಲ ನನ್ನಲಿತ್ತು. ಹಾಡು ಬಿಡುಗಡೆ ಮಾಡಿಕೊಟ್ಟ ಅವರಿಗೆ ವಂದನೆ.‌ ಇಂದು ಎರಡು ಹಾಡುಗಳನ್ನು ಬಿಡುಗಡೆ ಮಾಡಿದ್ದು, “ಮುದ್ದಾದ” ಹಾಡನ್ನು ಕವಿರಾಜ್ ಅವರು ಬರೆದಿದ್ದು, ನಿಹಾಲ್ ತಾವ್ರೊ ಹಾಡಿದ್ದಾರೆ.

ಜೆಸ್ಸಿ ಗಿಫ್ಟ್ ಸಂಗೀತ ನೀಡಿದ್ದಾರೆ. ಮತ್ತೊಂದು ಹಾಡನ್ನು ಕೆ.ಕಲ್ಯಾಣ್ ಅವರು ಬರೆದಿದ್ದು, ಆ ಹಾಡನ್ನು ನನ್ನ ಅಕ್ಕ ಗೌರಿ ಲಂಕೇಶ್ ಅವರಿಗೆ ಅರ್ಪಣೆ ಮಾಡಲಾಗಿದೆ. ಇನ್ನು ಚಿತ್ರಕ್ಕೆ ಸೆನ್ಸಾರ್ ಮಂಡಳಿ ‘ಯು’ ಪ್ರಮಾಣ ಪತ್ರ ನೀಡಿದೆ. ಆಗಸ್ಟ್ 15ಕ್ಕೆ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಗಂಗಾಧರ್ ಮೈಸೂರು ಭಾಗದ ವಿತರಕರು. ಮೈಸೂರು ಒಂದನ್ನು ಬಿಟ್ಟು ವಿಶಾಲ ಕರ್ನಾಟಕಕ್ಕೆ ಜಯಣ್ಣ ಫಿಲಂಸ್ ಅವರು ವಿತರಣೆ ಮಾಡುತ್ತಿದ್ದಾರೆ. ಡಬ್ಬಿಂಗ್ ರೈಟ್ಸ್ ಕೂಡ ಮಾರಾಟವಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಹಾಗೂ ಟೀಸರ್ ಮೂಲಕ ನಮ್ಮ ಚಿತ್ರ ಗೆದ್ದಿದೆ. ಇನ್ನೇನಿದ್ದರೂ ನಿರ್ದೇಶಕನಾಗಿ ನಾನು ಗೆಲ್ಲಬೇಕು” ಎಂದರು.

ಇದನ್ನೂ ಓದಿ : ದಾವಣಗೆರೆಯಲ್ಲಿ ಮಚ್ಚಿನಿಂದ ಹೊಡೆದು ಯುವಕನ ಬರ್ಬರ ಹ*ತ್ಯೆ..!

Leave a Comment

DG Ad

RELATED LATEST NEWS

Top Headlines

3 ಪ್ರಕರಣಗಳ ಪೈಕಿ ಎರಡರಲ್ಲಿ ದರ್ಶನ್​ A1 – ನಟೋರಿಯಸ್ ರೌಡಿಶೀಟರ್​​ಗಳ ಜೊತೆ ದಾಸನ ಕೇಸ್ ಫೈಲ್..!

ಬೆಂಗಳೂರು : ಕೊಲೆ ಆರೋಪಿ ದರ್ಶನ್​ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಫೋಟೋ ಮತ್ತು ವಿಡಿಯೋಗಳು ವೈರಲ್​ ಆಗಿವೆ. ಅಷ್ಟಕ್ಕೂ ಕಾರಾಗೃಹದಲ್ಲಿ

Live Cricket

Add Your Heading Text Here