ಯಾದಗಿರಿ : ಸಾರಿಗೆ ಬಸ್ ಡಿಕ್ಕಿಯಾಗಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಯಾದಗಿರಿಯಲ್ಲಿ ನಡೆದಿದೆ. ಒಂದು ವರ್ಷದ ಮಗು ಹನುಮಂತ(1), ಹನುಮಂತ ತಂದೆ ಆಂಜನೇಯ (35) ತಾಯಿ ಗಂಗಮ್ಮ (28), ಹನುಮಂತನ ಸಹೋದರನ ಮಕ್ಕಳಾದ ಪವಿತ್ರ (5) ಹಾಗೂ ರಾಯಪ್ಪ (3) ಸಾವನ್ನಪ್ಪಿದ ದುರ್ವೈವಿಗಳು.
ಮೂವರು ಮಕ್ಕಳು ಸೇರಿ ಒಂದೇ ಬೈಕ್ನಲ್ಲಿ ಐದು ಜನ ಸುರಪುರದಿಂದ ತಿಂಥಣಿ ಕಡೆಗೆ ಹೊರಟ್ಟಿದ್ದರು. ಆ ವೇಳೆ ಹಿಂಬದಿಯಿಂದ ಬಂದ ಕೆಎಸ್ಆರ್ಟಿಸಿ ಬಸ್ ರಭಸವಾಗಿ ಗುದ್ದಿದೆ. ಘಟನೆಯಲ್ಲಿ ಇಡೀ ಕುಟುಂಬವೇ ಬಲಿಯಾಗಿದೆ.
ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Author: Btv Kannada
Post Views: 1,863