ಬೆಂಗಳೂರು : ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಬಮೂಲ್)ನ ನಿರ್ದೇಶಕರ ಸ್ಥಾನಗಳಿಗೆ ಮೇ 25ರಂದು ಚುನಾವಣೆ ನಿಗದಿ ಪಡಿಸಿ ಚುನಾವಣಾಧಿಕಾರಿ ಅಧಿಸೂಚನೆ ಹೊರಡಿಸಿದ್ದಾರೆ. ರಾಮನಗರ, ಚನ್ನಪಟ್ಟಣ, ಕನಕಪುರ, ಹಾರೋಹಳ್ಳಿ, ಮಾಗಡಿ, ಕುದೂರು (ರಾಮನಗರ ಜಿಲ್ಲೆಯ 6 ಕ್ಷೇತ್ರಗಳು), ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ (ಬೆಂಗಳೂರು ಗ್ರಾಮಾಂತರದ 4 ಕ್ಷೇತ್ರಗಳು). ಬೆಂಗಳೂರು ಉತ್ತರ, ಪೂರ್ವ, ದಕ್ಷಿಣ ಮತ್ತು ಆನೇಕಲ್ (ಬೆಂಗಳೂರು ನಗರ ಜಿಲ್ಲೆಯ 4 ಕ್ಷೇತ್ರಗಳು) ಸೇರಿ ಒಟ್ಟು 14 ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.
ಚುನಾವಣೆಗೆ ದಿನಾಂಕ ನಿಗದಿ ಆಗುತ್ತಿದ್ದಂತೆ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಕೆಎಂಎಫ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಬಮೂಲ್ ನಿರ್ದೇಶಕರ ಸ್ಥಾನಕ್ಕೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.
ಹೌದು.. ಕಳೆದ ಲೋಕಸಭೆ ಚುನಾವಣೆಯಲ್ಲಿ ಪರಾಭವಗೊಂಡಿರುವ ಡಿ.ಕೆ.ಸುರೇಶ್ ಅವರು ಕೆಎಂಎಫ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗುತ್ತಿದೆ. ಇದಕ್ಕಾಗಿ ಬಮೂಲ್ ನಿರ್ದೇಶಕರಾಗಿ ಆಯ್ಕೆಯಾಗುವ ಇಂಗಿತವವನ್ನು ಹೊರ ಹಾಕಿದ್ದಾರೆ ಎಂದು ಹೇಳಲಾಗಿದೆ. ಇನ್ನು KMF ಅಧ್ಯಕ್ಷರಾಗಲು ಬಮೂಲ್ ಸೇರಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಅಗತ್ಯವಿಲ್ಲ. ಸರ್ಕಾರವೇ ನೇರವಾಗಿ ನಿರ್ದೇಶಕ ಸ್ಥಾನಕ್ಕೆ ನಾಮನಿರ್ದೇಶನ ಮಾಡಿ ನಂತರ ಅಧ್ಯಕ್ಷರಾಗಿ ಆಯ್ಕೆ ಮಾಡಿಕೊಳ್ಳಲು ಅವಕಾಶವಿದೆ. ಇದರ ನಡುವೆ ಸುರೇಶ್ ಅವರು ಬಮೂಲ್ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸುವ ಸಾಧ್ಯತೆ ಕಡಿಮೆ ಎನ್ನುವ ಮಾತು ಸಹ ಹರಿದಾಡುತ್ತಿದೆ.
ಒಟ್ಟಿನಲ್ಲಿ ಚುನಾವಣೆಯು ಪ್ರತಿಷ್ಠೆಯ ಜತೆಗೆ, ಸವಾಲಿಗೆ ಕಾರಣವಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿನಿಧಿಸುವ ಜಿಲ್ಲೆಯಾಗಿರುವ ಕಾರಣ ಬಮೂಲ್ ಚುನಾವಣೆಯು ಸಾಕಷ್ಟು ರಂಗೇರಿದೆ. ಇನ್ನೊಂದೆಡೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ಈ ಚುನಾವಣೆಯಲ್ಲಿ ಮೈತ್ರಿ ಧರ್ಮ ಪಾಲನೆ ಮಾಡಲಿದೆ ಎಂಬ ಪ್ರಶ್ನೆಗೆ ಶೀಘ್ರದಲ್ಲಿಯೇ ಉತ್ತರ ಸಿಗಲಿದೆ.
ಇದನ್ನೂ ಓದಿ : http://ಇನ್ಮುಂದೆ ದ್ವೇಷ ಭಾಷಣ ಮಾಡಿದ್ರೆ 3 ವರ್ಷ ಜೈಲು ಶಿಕ್ಷೆ – ಮಹತ್ವದ ಮಸೂದೆ ಜಾರಿಗೆ ಮುಂದಾದ ರಾಜ್ಯ ಸರ್ಕಾರ!
.









