ಬಿಜಾಪುರ : ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ನಡೆಸಿದ ಎನ್‌ಕೌಂಟರ್‌ನಲ್ಲಿ 31 ನಕ್ಸಲರನ್ನು ಹೊಡೆದುರುಳಿಸಿದ್ದಾರೆ. ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಯೂ ಹುತಾತ್ಮರಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಘಟನೆಯೊಂದಿಗೆ, ಈ ವರ್ಷ ಇದುವರೆಗೆ ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 81 ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ.
ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭಾನುವಾರ ಬೆಳಗ್ಗೆ ವಿವಿಧ ಭದ್ರತಾ ಪಡೆಗಳು ನಡೆಸಿದ ಜಂಟಿ ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ಗುಂಡಿನ ಚಕಮಕಿ ನಡೆದಿದೆ. ಎನ್‌ಕೌಂಟರ್‌ನಲ್ಲಿ ಮೂವತ್ತೊಂದು ನಕ್ಸಲರು ಹತರಾಗಿದ್ದಾರೆ ಮತ್ತು ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬಸ್ತಾರ್ ರೇಂಜ್‌ನ ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ಪಿ ತಿಳಿಸಿದ್ದಾರೆ.
Author: Btv Kannada
Post Views: 172









