ಬೆಂಗಳೂರು : ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಇಂದು ಸಂಜಯನಗರದಲ್ಲಿ ನೂತನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಉದ್ಘಾಟನೆಯನ್ನು ನೆರವೇರಿಸಿದರು.

ಸುಸಜ್ಜಿತ ನೂತನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಂಜಯನಗರ ಪೊಲೀಸ್ ಸ್ಟೇಷನ್ ಮುಂಭಾಗ ಸ್ಥಳೀಯ ಶಾಸಕರ ಅನುದಾನದಲ್ಲಿ ನಿರ್ಮಿಸಲಾಗಿದೆ.

ನೂತನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಬಿಬಿಎಂಪಿ ಸದಸ್ಯರು, ಹೆಬ್ಬಾಳ ಹಾಗೂ ಆರ್.ಟಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಾರ್ಡ್ ಅಧ್ಯಕ್ಷರು, ಕ್ಷೇತ್ರ ವೈದ್ಯಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ಸ್ಥಳೀಯರು ಭಾಗಿಯಾಗಿದ್ದರು.
ಇದನ್ನೂ ಓದಿ : http://ಪ್ರೇಕ್ಷಕರನ್ನು ಕಾಡಲು ರೆಡಿಯಾದ ‘ನಿಮಿತ್ತ ಮಾತ್ರ’.. ಪ್ಯಾರಸೈಕಲಾಜಿಕಲ್ ಥ್ರಿಲ್ಲರ್ ಚಿತ್ರ ಫೆ.14ಕ್ಕೆ ರಿಲೀಸ್!
Author: Btv Kannada
Post Views: 325









