ಮುಡಾ ಪ್ರಕರಣ – ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್​ಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು : ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಸಿಎಂ ಸಿದ್ದರಾಮಯ್ಯ ಪತ್ನಿ ಹಾಗೂ ಸಚಿವ ಬೈರತಿ ಸುರೇಶ್​ಗೆ ಸಮನ್ಸ್‌ ಜಾರಿ ಮಾಡಿದೆ.

ಇಡಿ ನೀಡಿರುವ ಸಮನ್ಸ್​ ರದ್ದುಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದೆ.

ಹೈಕೋರ್ಟ್ ಧಾರವಾಡ ಪೀಠದಲ್ಲಿ ವಿಚಾರಣೆ ನಡೆಸಿ, ವಾದ ಪ್ರತಿವಾದ ಆಲಿಸಿದ ನ್ಯಾ.ಎಂ.ನಾಗಪ್ರಸನ್ನ ಮಧ್ಯಂತರ ಆದೇಶ ಮುಂದಿನ ವಿಚಾರಣೆವರೆಗೂ ಮುಂದುವರಿಸಿ ಮತ್ತೆ 10ದಿನಗಳ ಕಾಲ ಸಿಎಂ ಪತ್ನಿ, ಸಚಿವ ಬೈರತಿ ಸುರೇಶ್ ರಿಲೀಫ್ ನೀಡಿದ್ದಾರೆ.

ಇದನ್ನೂ ಓದಿ : http://ಸಂಜಯನಗರದ ನೂತನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟಿಸಿದ ಸಚಿವ ಬೈರತಿ ಸುರೇಶ್!

Btv Kannada
Author: Btv Kannada

Leave a Comment

Read More