ಸಕಲೇಶಪುರದಲ್ಲಿ ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿ – 14 ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ!

ಸಕಲೇಶಪುರ : ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಸಕಲೇಶಪುರದ ನಿಡನೂರು ಕೂಡಿಗೆ ಬಳಿ ನಡೆದಿದೆ.

ತಮಿಳುನಾಡಿನ ಸೇಲಂನಿಂದ ಮಡಿಕೇರಿಯ ಶನಿವಾರಸಂತೆ ಬಳಿ ಇರುವ ಕಾಫಿ ತೋಟಕ್ಕೆ ಕಾರ್ಮಿಕರನ್ನು ಟಾಟಾ ವಿಂಗರ್ ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ರಸ್ತೆ ಬದಿಗೆ ವಾಹನ ಪಲ್ಟಿಯಾಗಿದೆ. ದುರ್ಘಟನೆಯಲ್ಲಿ 14 ಮಂದಿ ಗಾಯಗೊಂಡ್ಡಿದ್ದು, ನಾಲ್ವರು ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಇನ್ನು ವಾಹನದಲ್ಲಿ ಸಿಲುಕಿದ್ದ ಕೂಲಿ ಕಾರ್ಮಿಕರನ್ನು ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುಗಳಿಗೆ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : http://ವಂಚಕಿ ಐಶ್ವರ್ಯಾ ಗೌಡ CDR​ ಕೇಸ್​​ – ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ..!

Btv Kannada
Author: Btv Kannada

Leave a Comment

Read More

Read More

21:18