ಕಾರವಾರ : KSRTC ಬಸ್ ಪಲ್ಟಿಯಾದ ಪರಿಣಾಮ 17ಕ್ಕೂ ಹೆಚ್ಚು ಜನ ಪ್ರಯಾಣಿಕರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಬಳಿ ನಡೆದಿದೆ.

ಶಿರಸಿಯಿಂದ ಬೆಳಗಾವಿಗೆ ಹೋಗುತಿದ್ದ KSRTC ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : http://ಸಿದ್ದರಾಮಯ್ಯ ಎಷ್ಟು ಅಸಮರ್ಥ ಸಿಎಂ ಎಂಬುದಕ್ಕೆ ಈ ಘಟನೆ ಸಾಕ್ಷಿ – ಉದಯಗಿರಿ ಗಲಾಟೆ ಬಗ್ಗೆ ಪ್ರತಾಪ್ ಸಿಂಹ ಆಕ್ರೋಶ!

Author: Btv Kannada
Post Views: 545