ಉದಯಗಿರಿ ಠಾಣೆ ಮೇಲೆ ಉದ್ರಿಕ್ತರಿಂದ ಕಲ್ಲು ತೂರಾಟ – ಘಟನೆ ಬಗ್ಗೆ ADGP ಹಿತೇಂದ್ರ ಹೇಳಿದ್ದೇನು?

ಮೈಸೂರು : ವ್ಯಕ್ತಿಯೊಬ್ಬ ಒಂದು ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವುದನ್ನು ವಿರೋಧಿಸಿ ಸಾವಿರಾರು ಜನ ನಿನ್ನೆ(ಫೆ.10) ರಾತ್ರೋರಾತ್ರಿ ಉದಯಗಿರಿ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದು, ಕಲ್ಲು ತೂರಾಟ ಮಾಡಿದ್ದಾರೆ. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿ, ಅಶ್ರುವಾಯು ಸಿಡಿಸಿ ಗುಂಪನ್ನು ಚದುರಿಸಿದ್ದಾರೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಸದ್ಯ ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ಇನ್ನು ಈ ಘಟನೆ ಬಗ್ಗೆ ಮಾಹಿತಿ ನೀಡಿದ ಎಡಿಜಿಪಿ ಹಿತೇಂದ್ರ ಅವರು, ಉದಯಗಿರಿ ಗಲಾಟೆಯಲ್ಲಿ ಏಳು ಜನ ಪೊಲೀಸರಿಗೆ ಗಾಯ ಆಗಿದೆ. ಗಲಾಟೆ ಮಾಡಿದವರ ಬಂಧನಕ್ಕೆ ಸ್ಥಳೀಯ ಪೊಲೀಸರಿಂದ ಟೀಂ ರಚನೆ ಮಾಡಲಾಗಿದೆ. ಅವಹೇಳನಕಾರಿ ಪೋಸ್ಟರ್ ಹಾಕಿದ ವಿಚಾರದಲ್ಲಿ ಆರೋಪಿಯನ್ನ ಬೇಗ ಬಿಟ್ಟುಬಿಡ್ತಾರೆ ಎಂದು ಗಲಾಟೆ ಮಾಡಿದ್ದಾರೆ.

ಪೋಸ್ಟರ್ ವಿಚಾರದಲ್ಲಿ ಕೆಲವು ವಂದತಿ ಹಬ್ಬಿದ್ದಕ್ಕೆ ಗಲಾಟೆಯಾಗಿದೆ. ಗಲಾಟೆಯಿಂದ ಯಾರಿದ್ದಾರೆ, ಯಾವುದಾದರೂ ಸಂಘಟನೆ ಇದೆಯಾ ಅನ್ನೋದ್ರ ಬಗ್ಗೆ ತನಿಖೆಯಿಂದ ಗೊತ್ತಾಗಲಿದೆ. ಸದ್ಯಕ್ಕೆ ಪರಿಸ್ಥಿತಿ ಶಾಂತವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Btv Kannada
Author: Btv Kannada

Leave a Comment

Read More