ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ – ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ!

ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆ ಜಾರಿಗೊಳಿಸುವಂತ ನಿರ್ಧಾರವನ್ನು ಸರ್ಕಾರ ಕೈಗೊಂಡಿತ್ತು. ಅದರಂತೆ ಮೈಕ್ರೋ ಫೈನಾನ್ಸ್​ ಕಿರುಕುಳಕ್ಕೆ ಬ್ರೇಕ್‌ ಹಾಕಬೇಕೆಂದು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯಪಾಲರಿಗೆ ಕಳಿಸಿದ್ದರು.

ಆದರೆ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ನಿರಾಕರಸಿದ್ದ ರಾಜ್ಯಪಾಲರು, ಸರ್ಕಾರಕ್ಕೆ ವಾಪಸ್‌ ಕಳಿಸಿದ್ದರು. ಇದರಲ್ಲಿರುವ ಅಂಶಗಳನ್ನ ನೋಡಿದರೆ ಮುಂದಿನ ದಿನಗಳಲ್ಲಿ ಮಾರಕ ಆಗಲಿದೆ ಅನ್ನೋ ಕಾರಣ ನೀಡಿ ಸರ್ಕಾರ ಸ್ಪಷ್ಟನೆ ಕೇಳಿ ವಾಪಸ್‌ ಮಾಡಿದ್ದರು. ಇದೀಗ ಪರಿಶೀಲನೆ ನಡೆಸಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸುಗ್ರೀವಾಜ್ಞೆಗೆ ಕೆಲವು ಸಲಹೆ ಪಾಲಿಸುವಂತೆ ಸಲಹೆ ನೀಡಿ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದ್ದಾರೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಮೈಕ್ರೋ ಫೈನಾನ್ಸ್‌ ಕಂಪೆನಿಗಳು‌ ಸಾಲ ವಸೂಲಿಯ ನೆಪದಲ್ಲಿ ಸಾಲ ಪಡೆದವರಿಗೆ ನೀಡುತ್ತಿರುವ ಕಿರುಕುಳವನ್ನು ತಡೆಯಲು ರೂಪಿಸಲಾದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ದೊರೆತಿದೆ ಎಂದಿದ್ದಾರೆ.

ಈ ಕಾನೂನು ಶೀಘ್ರದಲ್ಲಿ ಜಾರಿಗೆ ಬಂದು ಮೈಕ್ರೋ ಫೈನಾನ್ಸ್‌ಗಳ ನಿಯಮ ಬಾಹಿರ ಸಾಲ ವಸೂಲಿ, ಕಿರುಕುಳಗಳ ವಿರುದ್ಧ ಜನರಿಗೆ ರಕ್ಷಣೆ ನೀಡಲಿದೆ. ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಹೆದರಿ ಯಾರೊಬ್ಬರೂ ದುಡುಕಿನ ನಿರ್ಧಾರ ಕೈಗೊಳ್ಳದಿರಿ. ನಿಮ್ಮ ಜೊತೆ ನಮ್ಮ ಸರ್ಕಾರ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : http://ಅಶ್ವಿನಿ ಪುನೀತ್ ರಾಜ್​ಕುಮಾರ್​ರಿಂದ ಪ್ರೇಮಿಗಳ ದಿನದಂದು “ಜಸ್ಟ್ ಮ್ಯಾರೀಡ್” ಚಿತ್ರದ” ಹಾಡು ಬಿಡುಗಡೆ!

Btv Kannada
Author: Btv Kannada

Leave a Comment

Read More