ಪತ್ನಿಯ ಕಿರುಕುಳ ಆರೋಪ – ಬೆಂಗಳೂರಿನಲ್ಲಿ ಖ್ಯಾತ ರ‍್ಯಾಪರ್ ಆತ್ಮಹತ್ಯೆ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಇತ್ತೀಚಿಗೆ ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್ ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ರಾಜ್ಯದಲ್ಲಿ ಭಾರಿ ಸದ್ದು ಮಾಡಿತ್ತು. ಇದೀಗ ಅಂತಹದ್ದೇ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಒಡಿಶಾದ ಖ್ಯಾತ ರ‍್ಯಾಪರ್ ಆಗಿರುವ​​ ಅಭಿನವ್ ಸಿಂಗ್ ಎಂಬುವವರು ಕಾಡುಬೀಸನಹಳ್ಳಿಯ ಅಪಾರ್ಟ್​​ಮೆಂಟ್​ನಲ್ಲಿ ವಿಷಸೇವಿಸಿ ಆತ್ಮಹತ್ಯೆ ಶರಣಾಗಿದ್ದಾರೆ. ಪತ್ನಿ ಕಿರುಕುಳದಿಂದ ಅಭಿನವ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ಅಭಿನವ್ ಸಿಂಗ್ ಅವರ ಕುಟುಂಬಸ್ಥರು ಆರೋಪಿಸಿದ್ದಾರೆ.

ವೃತ್ತಿಯಲ್ಲಿ ಇಂಜಿನಿಯರ್​ ಆಗಿದ್ದ ಒಡಿಶಾ ಮೂಲದ ಖ್ಯಾತ ರ‍್ಯಾಪರ್ ಅಭಿನವ್ ಸಿಂಗ್, ಬೆಂಗಳೂರಿನ ಕಾಡುಬೀಸನಹಳ್ಳಿಯ ಅಪಾರ್ಟ್​​ಮೆಂಟ್​ನಲ್ಲಿ ವಾಸವಾಗಿದ್ದರು. ಆದ್ರೆ, ಏಕಾಏಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಮಾರತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : http://ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ – ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ!

Btv Kannada
Author: Btv Kannada

Leave a Comment

Read More

Read More

21:19