ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನಲ್ಲಿ ನಡೆದಿದೆ.
ಬೆಳಗ್ಗೆ ಆಲೇನಹಳ್ಳಿ ಗ್ರಾಮದಿಂದ ಕೆ.ಆರ್.ಪೇಟೆಗೆ KSRTC ಬಸ್ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಇದ್ದ ಬೃಹತ್ ಮರಕ್ಕೆ ಬಸ್ ಡಿಕ್ಕಿಯಾಗಿದೆ. ಗಾಯಗೊಂಡಿರುವ ಪೈಕಿ ಹೆಚ್ಚು ಶಾಲಾ-ಕಾಲೇಜಿನ ವಿದ್ಯಾರ್ಥಿಗಳೇ ಇದ್ದು, ಹಲವು ಮಕ್ಕಳ ಕೈ ಕಾಲು ಮುರಿದು ಗಂಭೀರ ಗಾಯಗೊಂಡಿದ್ದಾರೆ.
ಇನ್ನೂ ಐವರ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಕೆ.ಆರ್.ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹಲವರನ್ನು ಮೈಸೂರಿಗೆ ರವಾನೆ ಮಾಡಲಾಗಿದೆ. ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ : http://ಎರಡನೇ ವಾರಕ್ಕೆ ಕಾಲಿಟ್ಟ ದೀಪಿಕಾ ದಾಸ್ ಅಭಿನಯದ ‘#ಪಾರುಪಾರ್ವತಿ’.. ಪ್ರೇಕ್ಷಕರಿಂದ ಅದ್ಭುತ ರೆಸ್ಪಾನ್ಸ್!

Author: Btv Kannada
Post Views: 1,817