‘ಮಾಂಕ್ ದಿ ಯಂಗ್’ ಟ್ರೇಲರ್​ಗೆ ಪ್ರೇಕ್ಷಕರು ಫಿದಾ – ಹೊಸತಂಡಕ್ಕೆ ಸಿಂಪಲ್ ಸುನಿ, ನಟ ಅಜಯ್ ರಾವ್ ಸಾಥ್!

ಟೀಸರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನರನ್ನು ತಲುಪಿರುವ “ಮಾಂಕ್ ದಿ ಯಂಗ್” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ನಟ ‘ಕೃಷ್ಣ’ ಅಜಯ್ ರಾವ್, ನಿರ್ದೇಶಕ ಸಿಂಪಲ್ ಸುನಿ, ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು, ನಟ ಬಬ್ಲು ಪೃಥ್ವಿರಾಜ್‌, ನಟ ನಿಶ್ಚಿತ್ ಸೇರಿದಂತೆ ಮುಂತಾದ ಗಣ್ಯರು ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಅಜಯ್ ರಾವ್, ಟ್ರೇಲರ್ ನೋಡಿದಾಗ ಹೊಸತಂಡದ ಚಿತ್ರ ಎಂದು ಹೇಳಲಾಗುವುದಿಲ್ಲ. ಅಷ್ಟು ಚೆನ್ನಾಗಿದೆ. ಚಿತ್ರ ಕೂಡ ಉತ್ತಮವಾಗಿ ಬಂದಿರುತ್ತದೆ ಎಂಬುದು ಟ್ರೇಲರ್​ನಲ್ಲೆ ತಿಳಿಯುತ್ತಿದೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.

ಇಡೀ ತಂಡದ ಶ್ರಮದಿಂದ ಒಂದೊಳ್ಳೆ ಚಿತ್ರ ನಿರ್ಮಾಣವಾಗಿದೆ. ಈ ಚಿತ್ರ ನಿಮಗೆ ಬೇಸರ ತರಿಸದೆ, ನಿಮ್ಮನ್ನು ಎರಡು ಗಂಟೆಗಳ ಕಾಲ ಹಿಡಿದಿಟ್ಟುಕೊಳ್ಳುತ್ತದೆ. ಅಂತಹ ಉತ್ತಮ ಕಥಾಹಂದರ ಹೊಂದಿದೆ “ಮಾಂಕ್ ದಿ ಯಂಗ್” ಎಂದು ನಟ ಸರೋವರ್ ಮಾತನಾಡಿದರು.

“ಮಾಂಕ್ ದಿ ಯಂಗ್” sci fi space odessy ಜಾನರ್​ನ ಕಥಾಹಂದರ ಹೊಂದಿರುವ ಚಿತ್ರ. ಪ್ರಪಂಚದಲ್ಲಿ ಜನ ಪಾಸಿಟಿವ್ ಗಿಂತ ನೆಗೆಟಿವ್ ಅನ್ನು ಹೆಚ್ಚು ಬೇಗ ನಂಬುತ್ತಾರೆ. ಆದರೆ ಪಾಸಿಟಿವ್ ಏನು ಎಂಬುದು ನಿಧಾನಕ್ಕೆ ಎಲ್ಲರಿಗೂ ತಿಳಿಯುತ್ತದೆ. ಈ ಅಂಶವನ್ನಿಟ್ಟುಕೊಂಡು ಕಥೆ ಹೆಣೆಯಲಾಗಿದೆ. ಸಿಜೆ ವರ್ಕ್ ಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ಚಿತ್ರದ ನಿರ್ದೇಶಕ ಮಾಸ್ಚಿತ್ ಸೂರ್ಯ ಮಾಹಿತಿ ಹಂಚಿಕೊಂಡಿದ್ದಾರೆ.

ಇನ್ನು ಚಿತ್ರದಲ್ಲಿ ನಾಯಕಿಯಾಗಿ ಸೌಂದರ್ಯ ಗೌಡ, ನಟ ಬಬ್ಲು ಪೃಥ್ವಿರಾಜ್‌, ಉಷಾ ಭಂಡಾರಿ, ನಟ ಪ್ರಣಯ್ ಮೂರ್ತಿ ಬಣ್ಣ ಹಚ್ಚಿದ್ದಾರೆ. ಛಾಯಾಗ್ರಾಹಕರಾಗಿ ಕಾರ್ತಿಕ್ ಶರ್ಮ, ಸಂಗೀತ ನಿರ್ದೇಶಕ ಸ್ವಾಮಿನಾಥನ್ ಕೆಲಸ ಮಾಡಿದ್ದಾರೆ.

Btv Kannada
Author: Btv Kannada

Leave a Comment

Read More

Read More

12:21