ಆನೇಕಲ್ : ಬೆಳ್ಳಂಬೆಳಗ್ಗೆ ರೌಡಿ ಶೀಟರ್ಗಳ ಮನೆ ಮೇಲೆ ಜಿಗಣಿ ಪೊಲೀಸರು ದಾಳಿ ಮಾಡಿದ್ದು, ರೌಡಿಶೀಟರ್ಗಳಿಗೆ ನಡುಕ ಹುಟ್ಟಿಸಿದ್ದಾರೆ.
ಆನೇಕಲ್ ಉಪವಿಭಾದ ಜಿಗಣಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡದಿಂದ ದಾಳಿ ನಡೆಸಲಾಗಿದೆ. ಹೆಚ್ಚು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ಗಳ ಮನೆಯಲ್ಲಿ ಪೊಲೀಸರು ತಲಾಶ್ ನಡೆಸಿದ್ದಾರೆ.
ಕೆಲವು ರೌಡಿ ಶೀಟರ್ಗಳ ಮನೆಗಳಲ್ಲಿ ಮಾರಕಸ್ತ್ರಾಗಳು ಪತ್ತೆಯಾಗಿದ್ದು, ಆರು ಮಂದಿ ರೌಡಿಶೀಟರ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೌಡಿ ಶೀಟರ್ಗಳನ್ನು ಠಾಣೆಗೆ ಕರೆತಂದು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಈ ವೇಳೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಖಡಕ್ ವಾರ್ನಿಂಗ್ ಕೊಟ್ಟಿದ್ದು, ಜಿಗಣಿ ಇನ್ಸ್ಪೆಕ್ಟರ್ ಮಂಜುನಾಥ್ ರೌಡಿಶೀಟರ್ಗಳ ಬೆವರಿಳಿಸಿದ್ದಾರೆ.
ಇದನ್ನೂ ಓದಿ : http://ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಇಂದು ಅಧಿಕೃತವಾಗಿ ಕಾಂಗ್ರೆಸ್ಗೆ ಸೇರ್ಪಡೆ!
Author: Btv Kannada
Post Views: 744









