ಹಾಸನ : ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚೌಲಗೆರೆ ಟೋಲ್ ಬಳಿ ಭಾನುವಾರ ರಾತ್ರಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 7 ಕಾರುಗಳು ಜಖಂಗೊಂಡಿವೆ.
ಇತ್ತೀಚೆಗೆ ಹೊಸದಾಗಿ ಆರಂಭಗೊಂಡ ಚೋಲಗೆರೆ ಟೋಲ್ ಬಳಿ ಸಾಲುಗಟ್ಟಿ ವಾಹನಗಳು ನಿಂತಿದ್ದವು. ಈ ವೇಳೆ ಅತಿ ವೇಗವಾಗಿ ಬಂದ ಕಾರೊಂದು ನಿಂತಿದ್ದ ಕಾರುಗಳಿಗೆ ಡಿಕ್ಕಿಯಾಗಿದೆ. ಪರಿಣಾಮ 7 ಕಾರುಗಳು ಜಖಂಗೊಂಡಿವೆ.
ವೀಕೆಂಡ್ ಹಿನ್ನಲೆಯಲ್ಲಿ ಹೈವೆಯಲ್ಲಿ ವಾಹನಗಳ ಸಂಚಾರ ಹೆಚ್ಚಿದ್ದು, ಸರಣಿ ಅಪಘಾತದಿಂದ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.ಬಳಿಕ ಪೊಲೀಸರು ಜಖಂಗೊಂಡ ವಾಹನವನ್ನು ತೆರವುಗೊಳಿಸಿ, ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಅಪಘಾತದಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
Author: Btv Kannada
Post Views: 2,607









