ದಾಖಲೆಯ 16ನೇ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ – ಮಾ.7ಕ್ಕೆ ಆಯವ್ಯಯ ಮಂಡಿಸಲಿರುವ ಸಿಎಂ ಸಿದ್ದು!

ಬೆಂಗಳೂರು : 2025-26ನೇ ಸಾಲಿನ ಆಯವ್ಯಯವನ್ನು ಮಾರ್ಚ್ 7ರಂದು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸೌಧದಲ್ಲಿ ತಿಳಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ, ರೈತ ಸಮುದಾಯದ ಕುಂದು ಕೊರತೆ, ಬೇಡಿಕೆಗಳನ್ನು ಆಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಬಜೆಟ್ ಮಂಡನೆಯ ಬಗ್ಗೆ ಮಾಹಿತಿ ನೀಡಿದರು.

ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತದೆ. ಮಾರ್ಚ್ 7ರಂದು ಬಜೆಟ್ ಮಂಡಿಸುತ್ತೇನೆ. ಬಳಿಕ 3 ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯಾಗುತ್ತದೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿ 16ನೇಯ ಬಜೆಟ್ ಮಂಡಿಸಲಿದ್ದು, ಈ ಮೂಲಕ ರಾಜ್ಯ ರಾಜಕೀಯ ಇತಿಹಾಸದಲ್ಲಿ ಹೊಸ ದಾಖಲೆಯನ್ನು ಬರೆಯಲಿದ್ದಾರೆ.

2024-25ರ ಬಜೆಟ್​ನ್ನು ಕಳೆದ ವರ್ಷದ ಫೆಬ್ರವರಿಯಲ್ಲಿ ಸಿದ್ದರಾಮಯ್ಯ ಮಂಡಿಸಿ 15ನೇ ಬಜೆಟ್ ಮಂಡಿಸಿದ ಕೀರ್ತಿ ಪಡೆದಿದ್ದರು. ಈಗ ಮಾರ್ಚ್ 7ರಂದು 2025-26ನೇ ಸಾಲಿನ ಬಜೆಟ್ ಮಂಡಿಸುವ ಮೂಲಕ 16ನೇ ಬಾರಿ ಮತ್ತು ರಾಜ್ಯ ರಾಜಕೀಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದವರು ಎಂಬ ಹೆಗ್ಗಳಿಕೆ ಪಡೆಯಲಿದ್ದಾರೆ.

ಇದನ್ನೂ ಓದಿ : http://ದಾಖಲೆಯ 16ನೇ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ – ಮಾ.7ಕ್ಕೆ ಆಯವ್ಯಯ ಮಂಡಿಸಲಿರುವ ಸಿಎಂ ಸಿದ್ದು!

Btv Kannada
Author: Btv Kannada

Leave a Comment

Read More