ಚಿಕ್ಕಮಗಳೂರು : ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯನ್ನೇ ಕೊಲೆಗೈದ ಅಳಿಯ!

ಚಿಕ್ಕಮಗಳೂರು : ಸುತ್ತಿಗೆಯಿಂದ ತಲೆಗೆ ಹೊಡೆದು ಅಳಿಯನೋರ್ವ ಅತ್ತೆಯನ್ನೇ ಕೊಲೆಗೈದಿರುವ ಘಟನೆ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ನಡೆದಿದೆ.

65 ವರ್ಷದ ಯಮುನಾ ಮೃತ ದುರ್ದೈವಿಯಾಗಿದ್ದು, ಅಳಿಯ ಶಶಿಧರ್ ಕೊಲೆಗೈದಿರುವ ಆರೋಪಿಯಾಗಿದ್ದಾನೆ. ಅತ್ತೆಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಬಳಿಕ ಆರೋಪಿ ಶಶಿಧರ್ ಪರಾರಿಯಾಗಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಆರೋಪಿ ಶಶಿಧರನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ : http://ಸುಕೃತಾ ವಾಗ್ಲೆ-ದೇವ್ ದೇವಯ್ಯ ಅಭಿನಯದ ಬಹುನಿರೀಕ್ಷಿತ ‘ಕಪಟಿ’ ಸಿನಿಮಾ ಮಾ.7ಕ್ಕೆ ತೆರೆಗೆ!

Btv Kannada
Author: Btv Kannada

Leave a Comment

Read More