ಬೆಳ್ಳಂಬೆಳಗ್ಗೆ ನಡುಗಿದ ದೆಹಲಿ… ಪ್ರಬಲ ಭೂಕಂಪಕ್ಕೆ ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ – 4.0 ತೀವ್ರತೆ ದಾಖಲು!

ನವದೆಹಲಿ : ರಾಷ್ಟ್ರ ರಾಜಧಾನಿಯ ಎನ್‌ಸಿಆರ್‌ನಲ್ಲಿ ಇಂದು (ಫೆ.17) ಬೆಳ್ಳಂಬೆಳಗ್ಗೆ 4.0 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದಿಂದ ಅನೇಕ ನಿವಾಸಿಗಳು ಭಯಭಿತರಾಗಿ ತಮ್ಮ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.

ಉತ್ತರ ಭಾರತದಾದ್ಯಂತ ಭೂಕಂಪನದ ಅನುಭವವಾಗಿದ್ದು, ದೆಹಲಿ ಭೂಕಂಪನದ ಕೇಂದ್ರಬಿಂದುವಾಗಿದೆ ಎಂದು ತಿಳಿದುಬಂದಿದೆ. ಮುಂಜಾನೆ 5:36ರ ವೇಳೆಗೆ ಭೂಕಂಪ ಸಂಭವಿಸಿದ್ದು, ಇಲ್ಲಿಯವರೆಗೆ ಯಾವುದೇ ಸಾವು-ನೋವುಗಳ ವರದಿಯಾಗಿಲ್ಲ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಭೂಕಂಪದಿಂದ ದೆಹಲಿ, ನೋಯ್ಡಾ, ಗ್ರೇಟರ್ ನೋಯ್ಡಾ ಮತ್ತು ಗಾಜಿಯಾಬಾದ್‌ನಲ್ಲಿರುವ ಹಲವಾರು ಬಹುಮಹಡಿ ಕಟ್ಟಡಗಳ ನಿವಾಸಿಗಳು ಆತಂಕದಿಂದ ಹೊರಗೆ ಓಡಿ ಬಂದಿದ್ದಾರೆ. ಗಾಜಿಯಾಬಾದ್‌ನ ನಿವಾಸಿಯೊಬ್ಬರು ಈ ರೀತಿಯ ಅನುಭವವನ್ನು ನನ್ನ ಜೀವಮಾನದಲ್ಲಿ ಅನುಭವಿಸಿರಲಿಲ್ಲ ಎಂದು ಆತಂಕದಿಂದ ನುಡಿದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸಂದೇಶ : “ಶಾಂತವಾಗಿರಿ, ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಿ” – ದೆಹಲಿಯಲ್ಲಿ ಬೆಳಗಿ ಜಾವ ಉಂಟಾದ ಭೂಕಂಪದ ನಂತರ ನಿವಾಸಿಗಳಿಗೆ ಪ್ರಧಾನಿ ಮೋದಿ ಶಾಂತವಾಗಿರಲು ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಲು ಹೇಳಿದ್ದು, ಅಧಿಕಾರಿಗಳು ಪರಿಸ್ಥಿತಿಯ ಮೇಲೆ ತೀವ್ರ ನಿಗಾ ಇಡುತ್ತಿದ್ದಾರೆ ಎಂದು Xನಲ್ಲಿ ಪೋಸ್ಟ್‌ ಮಾಡಿದ್ದಾರೆ.

Btv Kannada
Author: Btv Kannada

Leave a Comment

Read More

Read More