ಐಪಿಎಲ್ ಹಬ್ಬಕ್ಕೆ ಮುಹೂರ್ತ ಫಿಕ್ಸ್.. ಮೊದಲ ಪಂದ್ಯದಲ್ಲಿ RCB-KKR ಮುಖಾಮುಖಿ – ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ!

ವಿಶ್ವದ ಅತಿದೊಡ್ಡ ಕ್ರಿಕೆಟ್ ಲೀಗ್ ಎಂಬ ಖ್ಯಾತಿ ಪಡೆದಿರುವ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)‌ನ 18ನೇ ಆವೃತ್ತಿಯ ವೇಳಾಪಟ್ಟಿ ಬಿಡುಗಡೆಯಾಗಿದೆ.

ಬಹುನಿರೀಕ್ಷಿತ ಐಪಿಎಲ್ 2025ರ ಟೂರ್ನಿ ಮಾರ್ಚ್ 22ರಿಂದ ಪ್ರಾರಂಭವಾಗಲಿದ್ದು, ಮೇ 25ರಂದು ಫೈನಲ್ ಪಂದ್ಯ ನಡೆಯಲಿದೆ. ಈ ಬಾರಿ ಉದ್ಘಾಟನಾ ಮತ್ತು ಫೈನಲ್ ಪಂದ್ಯಗಳನ್ನು ಆಯೋಜಿಸುವ ಜವಾಬ್ದಾರಿಯನ್ನು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ಗೆ ನೀಡಲಾಗಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಎದುರಿಸಲಿದೆ.

ಮಿಲಿಯನ್ ಡಾಲರ್ ಕ್ರಿಕೆಟ್ ಟೂರ್ನಿ ಎಂದು ಕರೆಸಿಕೊಳ್ಳುವ ಈ ಐಪಿಎಲ್​ನಲ್ಲಿ ದೇಶದ ವಿವಿಧ 13 ನಗರಗಳಲ್ಲಿ ಒಟ್ಟು 74 ಪಂದ್ಯಗಳು ನಡೆಯಲಿವೆ. ಕಳೆದ ಬಾರಿಯಂತೆ ಈ ಬಾರಿ ಕೂಡಾ 10 ಬಲಾಢ್ಯ ತಂಡಗಳು ಐಪಿಎಲ್ ಟ್ರೋಫಿಗಾಗಿ ಕಾದಾಡಲಿವೆ.

ಇನ್ನು ತಲಾ ಐದು ಬಾರಿಯ ಐಪಿಎಲ್ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್‌ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಟೂರ್ನಿಯ ಎರಡನೇ ದಿನ ಮುಖಾಮುಖಿಯಾಗಲಿವೆ. ಇನ್ನು ಕಳೆದ ಆವೃತ್ತಿಯ ರನ್ನರ್ ಅಪ್ ಸನ್‌ರೈಸರ್ಸ್ ಹೈದರಾಬಾದ್ ತಂಡವು ಮಾರ್ಚ್ 23ರಂದು ರಾಜಸ್ಥಾನ ರಾಯಲ್ಸ್ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ.

ಬೆಂಗಳೂರಿನಲ್ಲಿ ನಡೆಯಲಿರುವ ಮೊದಲ ಪಂದ್ಯ ಯಾವಾಗ? ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ತವರಿನ ಮೈದಾನವಾದ ಎಂ. ಚಿನ್ನಸ್ವಾಮಿ ಸ್ಟೇಡಿಯಂಬನಲ್ಲಿ ಏಪ್ರಿಲ್ 02ರಂದು ಮೊದಲ ಪಂದ್ಯವನ್ನಾಡಲಿದೆ. ಆರ್‌ಸಿಬಿ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ.

ಬೆಂಗಳೂರಿನಲ್ಲಿ ನಡೆಯಲಿರುವ ಆರ್‌ಸಿಬಿ ತಂಡದ ಪಂದ್ಯಗಳು ಯಾವಾಗ?

  1. ಏಪ್ರಿಲ್ 02 – ಆರ್‌ಸಿಬಿ vs ಗುಜರಾತ್ ಟೈಟಾನ್ಸ್ ಸಂಜೆ: 7.30ಕ್ಕೆ
  2. ಏಪ್ರಿಲ್ 10- ಆರ್‌ಸಿಬಿ vs ಡೆಲ್ಲಿ ಕ್ಯಾಪಿಟಲ್ಸ್ ಸಂಜೆ: 7.30ಕ್ಕೆ
  3. ಏಪ್ರಿಲ್ 18 – ಆರ್‌ಸಿಬಿ vs ಪಂಜಾಬ್ ಕಿಂಗ್ಸ್ ಸಂಜೆ: 7.30ಕ್ಕೆ
  4. ಏಪ್ರಿಲ್ 24 – ಆರ್‌ಸಿಬಿ vs ರಾಜಸ್ಥಾನ ರಾಯಲ್ಸ್ ಸಂಜೆ: 7.30ಕ್ಕೆ
  5. ಮೇ 03 – ಆರ್‌ಸಿಬಿ vs ಚೆನ್ನೈ ಸೂಪರ್ ಕಿಂಗ್ಸ್ ಸಂಜೆ: 7.30ಕ್ಕೆ
  6. ಮೇ 13 – ಆರ್‌ಸಿಬಿ vs ಸನ್‌ರೈಸರ್ಸ್ ಹೈದರಾಬಾದ್ ಸಂಜೆ: 7.30ಕ್ಕೆ
  7. ಮೇ 17 – ಆರ್‌ಸಿಬಿ vs ಕೋಲ್ಕತಾ ನೈಟ್ ರೈಡರ್ಸ್ ಸಂಜೆ: 7.30ಕ್ಕೆ

Btv Kannada
Author: Btv Kannada

Leave a Comment

Read More