ದೆಹಲಿ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತ ಆಯ್ಕೆ – ಮತ್ತೆ ಮಹಿಳಾ ನಾಯಕಿಗೆ ಮಣೆ ಹಾಕಿದ ಬಿಜೆಪಿ!

ದೆಹಲಿ : ರೇಖಾ ಗುಪ್ತಾ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಫೆಬ್ರವರಿ 8ರಂದು ಹೊರಬಿದ್ದ ದಿಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಆಡಳಿತರೂಢ ಆಮ್‌ ಆದ್ಮಿ ಪಕ್ಷವನ್ನು ಹಿಮ್ಮೆಟ್ಟಿಸಿ ಬಿಜೆಪಿ ಅಧಿಕಾರಕ್ಕೇರಿತ್ತು. 70 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆದ್ದುಕೊಂಡು ಭರ್ಜರಿ ಜಯ ದಾಖಲಿಸಿತ್ತು. ಎಎಪಿ ಕೇವಲ 22 ಸ್ಥಾನ ಗೆದ್ದು 10 ವರ್ಷಗಳ ಆಡಳಿತ ಅಂತ್ಯಗೊಳಿಸಿತ್ತು. ಇದೀಗ ದೆಹಲಿ 11 ದಿನಗಳ ಬಳಿಕ ಸಿಎಂ ಹೆಸರನ್ನು ಬಿಜೆಪಿ ಘೋಷಿಸಿದೆ.

ಪ್ರಸ್ತುತ ಭಾರತೀಯ ಜನತಾ ಪಕ್ಷ ಆಳುತ್ತಿರುವ ರಾಜ್ಯಗಳಲ್ಲಿ ಏಕೈಕ ಮಹಿಳಾ ಮುಖ್ಯಮಂತ್ರಿಯಾಗಿರುವ ರೇಖಾ ಗುಪ್ತಾ, ದೆಹಲಿ ಚುನಾವಣೆಯಲ್ಲಿ ಶಾಲಿಮಾರ್ ಬಾಗ್ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದರು. ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆಯಲ್ಲಿ ರೇಖಾ ಹೆಸರನ್ನು ಘೋಷಿಸಲಾಯಿತು.

ಈ ಹಿಂದೆ ಬಿಜೆಪಿಯಿಂದ ಸುಷ್ಮಾ ಸ್ವರಾಜ್‌, ಕಾಂಗ್ರೆಸ್‌ನಿಂದ ಶೀಲಾ ದೀಕ್ಷಿತ್‌ ಹಾಗೂ ಎಎಪಿಯಿಂದ ಆತಿಶಿ ದಿಲ್ಲಿಯ ಮುಖ್ಯಮಂತ್ರಿಗಳಾಗಿದ್ದರು. ಇದೀಗ ರೇಖಾ ಗುಪ್ತಾ ಈ ಸ್ಥಾನ ಅಲಂಕರಿಸಲಿದ್ದು, ರಾಜಧಾನಿಯಲ್ಲಿ ಮಹಿಳೆಯರ ದರ್ಬಾರ್‌ ಮುಂದುವರಿಯಲಿದೆ.

Btv Kannada
Author: Btv Kannada

Leave a Comment

Read More