ಬೆಂಗಳೂರು : ಶಾಸಕ ಮುನಿರತ್ನ ವಿರುದ್ಧದ ಜಾತಿನಿಂದನೆ ಪ್ರಕರಣ ಸಂಬಂಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಮುನಿರತ್ನ ಅರ್ಜಿ ಸಲ್ಲಿಸಿದ್ದರು.
ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಇಂದು ಅರ್ಜಿ ವಿಚಾರಣೆ ನಡೆದಿದ್ದು, ಮುನಿರತ್ನ ಪರವಾಗಿ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದ್ದಾರೆ. ಸಿಐಡಿ ಅಧಿಕಾರಿಗಳ ಒಳಗೊಂಡ SITಗೆ ಪೊಲೀಸ್ ಠಾಣೆ ಮಾನ್ಯತೆ ಇಲ್ಲ, ನಡೆಸಲು 17Aಅನುಮತಿ ಪಡೆದಿಲ್ಲ. ಈ ತಂಡ ತನಿಖಾ ವರದಿಯನ್ನ ಕೋರ್ಟ್ಗೆ ಸಲ್ಲಿಸಲು ಅವಕಾಶ ಇಲ್ಲ, 2019-20 ಅವಧಿಯಲ್ಲಿ ನಡೆದಿದೆ ಎನ್ನಲಾದ ವಿಚಾರಕ್ಕೆ ರಾಜಕೀಯ ದುರುದ್ದೇಶದಿಂದ ದೂರು ನೀಡಲಾಗಿದೆ ಎಂದು ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಹೇಳಿದರು.
ಸರ್ಕಾರದ ಪರವಾಗಿ ಎಸ್ಪಿಪಿ ಪ್ರದೀಪ್ ವಾದ ಮಂಡಿಸಿದ್ದು, ತನಿಖೆ ನಡೆಸಲು 17Aಅಡಿ ಅನುಮತಿ ಕೇಳಲಾಗಿದೆ ಇನ್ನೂ ಸಿಕ್ಕಿಲ್ಲ. ಸಿಐಡಿಗೆ ಪೊಲೀಸ್ ಠಾಣೆ ಮಾನ್ಯತೆ ನೀಡಿ ಗೃಹ ಇಲಾಖೆ ನೀಡಿದೆ. ಆದ್ರೆ SITಗೆ ಪೊಲೀಸ್ ಸ್ಟೇಷನ್ ಮಾನ್ಯತೆ ಇದ್ಯಾ.? SIT ಅಧಿಕಾರಿಗಳನ್ನು ಒಳಗೊಂಡ ತಂಡ ಮಾಡಲಾಗಿದೆ. SIT ಮುಖ್ಯಸ್ಥರಾಗಿ ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್ ಇದ್ದಾರೆ, ಹೀಗಾಗಿ ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಕೆಗೆ ಅವಕಾಶ ಇದೆ ಎಂದು ಎಸ್ಪಿಪಿ ಪ್ರದೀಪ್ ಹೇಳಿದರು. ವಾದ-ಪ್ರತಿವಾದ ಆಲಿಸಿ ಹೈಕೋರ್ಟ್ ನ್ಯಾ. ನಾಗಪ್ರಸನ್ನ ಪೀಠ ಆದೇಶ ಕಾಯ್ದಿರಿಸಿದೆ.
ಇದನ್ನೂ ಓದಿ : http://ಶಾಸಕ ಮುನಿರತ್ನ ವಿರುದ್ಧದ ಜಾತಿನಿಂದನೆ ಕೇಸ್ – ಆದೇಶ ಕಾಯ್ದಿರಿಸಿದ ಹೈಕೋರ್ಟ್!









