ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು!

ದೆಹಲಿ : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಅನಾರೋಗ್ಯಕ್ಕೀಡಾಗಿದ್ದಾರೆ. ಹೀಗಾಗಿ ಇವರನ್ನು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

78 ವರ್ಷದ ಸೋನಿಯಾ ಗಾಂಧಿ ಅವರನ್ನು ನಿನ್ನೆ ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಆರೋಗ್ಯದ ಮೇಲೆ ವೈದ್ಯರ ತಂಡ ನಿಗಾ ಇರಿಸಿದೆ.

ವಯೋಸಹಜ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರೋ ಸೋನಿಯಾ ಗಾಂಧಿ ಅವರು, ಈ ಹಿಂದೆ ಕೂಡ ಹಲವು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಆರೋಗ್ಯ ಸುಧಾರಿಸುತ್ತಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

Btv Kannada
Author: Btv Kannada

Leave a Comment

Read More