ರಾಜ್ಯದ ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ – 1 ವಾರದೊಳಗೆ ಯಜಮಾನಿಯರ ಖಾತೆಗೆ ಹಣ!

ರಾಜ್ಯದ ಮಹಿಳೆಯರಿಗೆ ಸರ್ಕಾರ ಶುಭಸುದ್ದಿ ಕೊಟ್ಟಿದೆ. ನಾರಿಯರು ಕಾತರದಿಂದ ಕಾಯುತ್ತಿರುವ ಗೃಹಲಕ್ಷ್ಮೀ ಹಣ ಇನ್ನೊಂದು ವಾರದೊಳಗೆ ನಿಮ್ಮ ನಿಮ್ಮ ಖಾತೆಗೆ ವರ್ಗಾವಣೆಯಾಗಲಿದೆ. ಸಾಲು ಸಾಲು ಟೀಕೆ, ಆಕ್ರೋಶದ ನಂತರ ರಾಜ್ಯ ಸರ್ಕಾರ ಎಚ್ಚೆತ್ತಿದ್ದು ಮೂರು ತಿಂಗಳಿಂದ ಬಂದ್ ಆಗಿದ್ದ ಗೃಹಲಕ್ಷ್ಮಿ ಜಮೆ ಪ್ರಕ್ರಿಯೆಗೆ ಮರು ಚಾಲನೆ ಸಿಗಲಿದೆ. 3 ತಿಂಗಳ ಬಾಕಿ ಹಣ ಏಕಕಾಲದಲ್ಲಿ ಜಮೆ ಆಗಲಿದೆ. ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ ಕೊಟ್ಟಿದ್ದಾರೆ.

ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು. ರಸ್ತೆ ಅಪಘಾತದಿಂದಾಗಿ ವಿಶ್ರಾಂತಿಯಲ್ಲಿದ್ದುದರಿಂದಾಗಿ ಹಣ ಸಂದಾಯವಾಗಲು ಸ್ವಲ್ಪ ವಿಳಂಬ ಆಯಿತು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದರು.

ಹಿಂದಿನ ಮಾದರಿಯಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಗೃಹಲಕ್ಷ್ಮೀ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದ್ದು, ಉಪ ನಿರ್ದೇಶಕರ ಮೂಲಕ ಹಣ ಹಾಕಲಾಗುತ್ತಿದೆ ಎಂದರು.

Btv Kannada
Author: Btv Kannada

Leave a Comment

Read More