ಬೆಂಗಳೂರು : ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)ಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಷ್ಟ್ರೀಯ ಅಧ್ಯಕ್ಷ ಎಂಕೆ ಫೈಜಿ ಎಂದೂ ಕರೆಯಲ್ಪಡುವ ಮೊಯ್ದೀನ್ ಕುಟ್ಟಿ ಕೆ. ಅವರನ್ನು ಮಾರ್ಚ್ 3ರಂದು ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.

ಈ ಬೆನ್ನಲ್ಲೇ ಇದೀಗ ಬೆಂಗಳೂರು, ದೆಹಲಿಯಲ್ಲಿರುವ SDPI ರಾಷ್ಟ್ರೀಯ ಪ್ರಧಾನ ಕಚೇರಿ ಸೇರಿದಂತೆ, ದೇಶಾದ್ಯಂತ 14 ಸ್ಥಳಗಳಲ್ಲಿ ED ದಾಳಿ ನಡೆಸಿದೆ.
ದೆಹಲಿಯ ಎಸ್‌ಡಿಪಿಐ ಪ್ರಧಾನ ಕಚೇರಿ, ಬೆಂಗಳೂರು, ಕೇರಳದ ತಿರುವನಂತಪುರಂ ಮತ್ತು ಮಲಪ್ಪುರಂ, ಆಂಧ್ರಪ್ರದೇಶದ ನಂದ್ಯಾಲ್, ಜಾರ್ಖಂಡ್‌ನ ಪಾಕೂರ್, ಮಹಾರಾಷ್ಟ್ರದ ಥಾಣೆ, ಚೆನ್ನೈ, ಕೋಲ್ಕತ್ತಾ, ಲಕ್ನೋ ಮತ್ತು ಜೈಪುರ ಸೇರಿದಂತೆ ದೆಹಲಿಯ ಎರಡು ಸ್ಥಳಗಳಲ್ಲಿ ದಾಳಿ ನಡೆದಿದ್ದು, ಶೋಧ ಕಾರ್ಯ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

Author: Btv Kannada
Post Views: 72