ಇಸ್ಲಾಮಾಬಾದ್ : ಬಲೂಚಿಸ್ತಾನದ ಖುಜ್ದಾರ್ ಜಿಲ್ಲೆಯ ಮಾರುಕಟ್ಟೆಯಲ್ಲಿ ಮೋಟಾರ್‌ಬೈಕಿಗೆ ಹಾಕಲಾಗಿದ್ದ ಐಇಡಿ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಯಲ್ಲಿ ಐದು ಮಂದಿ ಗಾಯಗೊಂಡಿದ್ದಾರೆ.
ನಾಲ್ ಪೊಲೀಸ್ ಠಾಣೆ ಅಧಿಕಾರಿ (SHO) ಬಹಾವಲ್ ಖಾನ್ ಪಿಂದ್ರಾನಿ ಅವರು ಸಾವು-ನೋವುಗಳ ಬಗ್ಗೆ ದೃಢಪಡಿಸಿದ್ದು, ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.
ಸ್ಫೋಟಕವನ್ನು ಮೋಟಾರ್‌ಸೈಕಲ್‌ಗೆ ಅಳವಡಿಸಲಾಗಿತ್ತು. ಕಾರಿನ ಪಕ್ಕದಲ್ಲಿ ಬೈಕ್ ನಿಲ್ಲಿಸಿದ ನಂತರ ರಿಮೋಟ್ ಮೂಲಕ ಸ್ಫೋಟಿಸಲಾಗಿದೆ ಎಂದು ವರದಿಯಾಗಿದೆ. ಬಾಂಬ್ ನಿಷ್ಕ್ರಿಯ ದಳ ಸ್ಥಳದಲ್ಲಿದ್ದು, ಪರಿಶೀಲನೆ ನಡೆಸುತ್ತಿದೆ ಸದ್ಯ ಗಾಯಾಳುಗಳನ್ನು ಚಿಕಿತ್ಸೆಗಾಗಿ ಖುಜ್ದಾರ್ ಬೋಧನಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Author: Btv Kannada
Post Views: 44