ಶತಕೋಟಿ ಭಾರತೀಯರು ಚಾತಕ ಪಕ್ಷಿಯಂತೆ ಎದುರು ನೋಡುತ್ತಿರುವ ಐಸಿಸಿ ಚಾಂಪಿಯನ್ಸ್ ಟ್ರೋಪಿ- 2025 ಭಾರತ ಮತ್ತು ನ್ಯೂಜಿಲೆಂಡ್ ನಡುವಣ ಫೈನಲ್ ಪಂದ್ಯ ಇಂದು ನಡೆಯಲಿದೆ. ಎರಡು ತಂಡಗಳು ಪ್ರಶಸ್ತಿಗಾಗಿ ತೀವ್ರ ಪೈಪೋಟಿ ನಡೆಸಲಿದ್ದು, ಫೈನಲ್ ಪಂದ್ಯವು ಇಂದು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಮಧ್ಯಾಹ್ನ 2:30ಕ್ಕೆ ಪಂದ್ಯ ಆರಂಭವಾಗಲಿದೆ. ನಡೆಯಲಿದೆ. ಅಜೇಯ ದಾಖಲೆಯೊಂದಿಗೆ ಫೈನಲ್ ಪ್ರವೇಶಿಸಿರುವ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಬಲಿಷ್ಠ ನ್ಯೂಜಿಲೆಂಡ್ ತಂಡದ ಸವಾಲನ್ನು ಎದುರಿಸಲು ಸಜ್ಜಾಗಿದೆ.

ಆತಿಥ್ಯ ವಹಿಸಿರುವ ರಾಷ್ಟ್ರ ಪಾಕಿಸ್ತಾನ ಟೂರ್ನಿಯಿಂದ ಗುಂಪು ಹಂತದಲ್ಲೇ ನಿರ್ಗಮಿಸಿದ್ದರೂ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಕದನಕ್ಕೆ ಹೈವೋಲ್ವೇಜ್ ಸ್ಪರ್ಶ ಸಿಕ್ಕಿದೆ. ಹೈಬ್ರಿಡ್ ಮಾದರಿದಯಲ್ಲಿ ಆತಿಥ್ಯದ ಅವಕಾಶ ಪಡೆದ ಟೀಮ್ ಇಂಡಿಯಾ ಅರಬ್ ನಾಡಿನಲ್ಲಿ 12 ವರ್ಷಗಳ ನಂತರ ಟ್ರೋಫಿಗೆ ಮುತ್ತಿಡಲು ಹವಣಿಸುತ್ತಿದೆ.

ಬಲಿಷ್ಠ ಕಿವೀಸ್ ತಂಡವನ್ನು ಭಾರತ ಯಾವುದೇ ಕಾರಣಕ್ಕೂ ಕಡೆಗಣಿಸುವಂತಿಲ್ಲ. ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್ ಮತ್ತು ರೋಹಿತ್ ಶರ್ಮ ಭಾರತದ ಬ್ಯಾಟಿಂಗ್ ಆಧಾರವಾದರೆ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ ಮತ್ತು ವಿಲ್ ಯಂಗ್ ಕಿವೀಸ್ ಶಕ್ತಿಯಾಗಿದ್ದಾರೆ. ಮೊಹಮ್ಮದ್ ಶಮಿ ಸೇರಿದಂತೆ ಇಬ್ಬರು ವೇಗಿಗಳು ಮತ್ತು ನಾಲ್ವರು ಸ್ಪಿನ್ನರ್‌ಗಳೊಂದಿಗೆ ಟೀಮ್ ಇಂಡಿಯಾ ಕಣಕ್ಕಿಳಿಯುವ ಸಾಧ್ಯತೆ ಇದೆ.

ಭಾರತ ತಂಡ ಪ್ರಶಸ್ತಿ ಗೆದ್ದರೆ, ಚಾಂಪಿಯನ್ಸ್ ಟ್ರೋಫಿಯಲ್ಲಿ ಮೂರು ಪ್ರಶಸ್ತಿ ಗೆದ್ದ ಮೊದಲ ತಂಡ ಎನಿಸಲಿದೆ. ಸದ್ಯ ತಲಾ 2 ಬಾರಿ ಗೆದ್ದಿರುವ ಭಾರತ ಮತ್ತು ಆಸೀಸ್ ವಂಟಿ ಅಗ್ರ ಸ್ಥಾನದಲ್ಲಿವೆ. ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಏಕದಿನ ಸರಣಿಯಲ್ಲಿ 119 ಬಾರಿ ಮುಖಾಮುಖಿ ಆಗಿವೆ. ಇದರಲ್ಲಿ ಕಿವೀಸ್ ಪಡೆ ಮೇಲೆ ಭಾರತ ಪ್ರಾಬಲ್ಯ ಸಾಧಿಸಿದೆ. ಈ ವರೆಗೂ ಭಾರತ ಒಟ್ಟು 61 ಪಂದ್ಯಗಳಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದೆ. ಇದೇ ವೇಳೆ, ಕಿವೀಸ್ ಪಡೆ ಕೂಡ ಭಾರತದ ವಿರುದ್ಧ 50 ಬಾರಿ ಗೆಲುವು ಸಾಧಿಸಿದೆ. ಉಭಯ ತಂಡಗಳ ನಡುವಿನ 7 ಪಂದ್ಯಗಳು ರದ್ದಾಗಿವೆ. ಒಂದು ಪಂದ್ಯ ಡ್ರಾನಲ್ಲಿ ಕೊನೆಗೊಂಡಿದೆ.

ಭಾರತ-ನ್ಯೂಜಿಲೆಂಡ್ ನಡುವಣ ಚಾಂಪಿಯನ್ಸ್ ಟ್ರೋಫಿ ಫೈನಲ್ ಫೈಟ್ ಫಲಿತಾಂಶಕ್ಕಾಗಿ ಜಗತ್ತಿನ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಹೊತ್ತಿನಲ್ಲೇ ಪಂದ್ಯದ ಟಿಕೆಟ್‌ಗಳು ಖಾಲಿಯಾಗಿರುವುದಾಗಿ ಆಯೋಜಕರು ತಿಳಿಸಿದ್ದಾರೆ. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದ ಎಲ್ಲಾ25,000 ಟಿಕೆಟ್‌ಗಳು ಮಾರಾಟಗೊಂಡು ಒಟ್ಟು 21.3 ಕೋಟಿ ರೂ. ಸಂಗ್ರಹವಾಗಿದೆ. ಟಿಕೆಟ್ ದರ ಕನಿಷ್ಠ 6,000 ರೂ.ಗಳಿಂದ ಗರಿಷ್ಠ 2.8 ಲಕ್ಷ ರೂ. ನಿಗದಿ ಪಡಿಸಲಾಗಿತ್ತು.

ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು :
ಭಾರತ ತಂಡ: ರೋಹಿತ್ ಶರ್ಮ(ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಅರ್ಷ್‌ದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ, ಮೊಹಮ್ಮದ್ ಶಮಿ, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ.
ನ್ಯೂಜಿಲೆಂಡ್ ತಂಡ: ಮಿಚೆಲ್ ಸ್ಯಾಂಟ್ನರ್(ನಾಯಕ), ಮೈಕೆಲ್ ಬ್ರಾಸ್‌ವೇಲ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ, ಲೂಕಿ ಫರ್ಗ್ಯೂಸನ್, ಮ್ಯಾಟ್ ಹೆನ್ರಿ, ಟಾಮ್ ಲೇಥಮ್, ಡೇರಿಲ್ ಮಿಚೆಲ್, ವಿಲ್ ಒ’ ರೂರ್ಕ್, ಗ್ಲೇನ್ ಫಿಲಿಪ್ಸ್, ರಚಿನ್ ರವೀಂದ್ರ, ನಥಾನ್ ಸ್ಮಿತ್, ಕೇನ್ ವಿಲಿಯಮ್ಸನ್, ವಿಲ್ ಯಂಗ್. ಜಾಕೋಬ್ ಡಫಿ.
ಇದನ್ನೂ ಓದಿ : https://btvkannada.com/2025/03/08/security-provide-rashmika-mandanna/
