ಬೆಂಗಳೂರು : ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ಸದ್ಯ ನ್ಯಾಯಾಂಗ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ ಮನೆಗೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬೆಂಗಳೂರಿನ ಲ್ಯಾವೆಲ್ಲಿ ರಸ್ತೆಯಲ್ಲಿರುವ ರನ್ಯಾ ಅಪಾರ್ಟ್ಮೆಂಟ್ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿ 1 ಗಂಟೆಗಳ ಕಾಲ ಪರಿಶೀಲನೆ ಮಾಡಿದ್ದಾರೆ.
ಸದ್ಯ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್‌ಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಮಾ.24 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಸದ್ಯ ರನ್ಯಾ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾಲ ಕಾಳೆಯುತ್ತಿದ್ದಾರೆ.

Author: Btv Kannada
Post Views: 49