ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ‘ಟಾಕ್ಸಿಕ್’ ಚಿತ್ರದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಇನ್ನೇನು ಕೆಲವೇ ಕೆಲವು ಸೀನ್‌ಗಳು ಮಾತ್ರ ಬಾಕಿ ಉಳಿದಿವೆ. ಕನ್ನಡ ಸೇರಿದಂತೆ ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಗಳ ಸಿನಿಪ್ರಿಯರ ಕುತೂಹಲ, ಕೌತುಕವನ್ನು ದುಪ್ಪಟ್ಟು ಮಾಡಿರುವ ಯಶ್, ಶೀಘ್ರವೇ ಬೆಳ್ಳಿಪರದೆಯ ಮೇಲೆ ರಾರಾಜಿಸುವುದಕ್ಕೆ ಸಜ್ಜಾಗುತ್ತಿದ್ದಾರೆ.

ಈ ಚಿತ್ರಕ್ಕೆ ಹಾಲಿವುಡ್ ಸಾಹಸ ನಿರ್ದೇಶಕ ಜೆ.ಜೆ. ಪೆರ್ರಿ ಅವರು ಯಶ್ಗೆ ಸಾಥ್ ನೀಡಿದ್ದು, ಸಿನಿಮಾದಲ್ಲಿ ಕೆಲವು ಸಾಹಸಮಯ ದೃಶ್ಯಗಳನ್ನು ಯಶ್ ಅವರಿಂದ ಮಾಡಿಸಿದ್ದಾರೆ. ಪ್ಯಾನ್ ಇಂಡಿಯಾ ಸೂಪರ್‌ಸ್ಟಾರ್ ಯಶ್ ಅಭಿನಯಕ್ಕೆ ಫಿದಾ ಆಗಿರುವ ಪೆರ್ರಿ, ಯಶ್‌ರನ್ನು ಹಾಡಿ ಹೊಗಳಿದ್ದಾರೆ. ನಟನ ಫೋಟೋ ಜತೆಗೆ ತಮ್ಮ ಮನದಾಳದ ಮಾತನ್ನು ಮುಕ್ತವಾಗಿ ಜಾಲತಾಣದಲ್ಲಿ ಬರೆದುಕೊಂಡಿರುವ ನಿರ್ದೇಶಕರು, ಯಶ್‌ರನ್ನು ಮೆಚ್ಚಿ ಮಾತನಾಡಿದ್ದಾರೆ.
‘ಟಾಕ್ಸಿಕ್’ ಚಿತ್ರದಲ್ಲಿ ನನ್ನ ಸ್ನೇಹಿತ ಯಶ್ ಜೊತೆ ಕೆಲಸ ಮಾಡಿದ್ದು ತುಂಬಾ ಖುಷಿ ಕೊಟ್ಟಿದೆ. ಭಾರತದಲ್ಲಿ ಇದ್ದಿದ್ದು ಖುಷಿ ಕೊಟ್ಟಿತು. ಯುರೋಪ್‌ನ ನನ್ನ ಅನೇಕ ಆತ್ಮೀಯ ಸ್ನೇಹಿತರೊಂದಿಗೆ ಕೆಲಸ ಮಾಡಲು ಅವಕಾಶ ಸಿಕ್ಕಿತು. ಇದನ್ನು ನೋಡಲು ಕಾದಿದ್ದೇನೆ. ಟಾಕ್ಸಿಕ್ ಸಿನಿಮಾ ನಿಜಕ್ಕೂ ಅದ್ಭುತ. ನಾವು ಏನನ್ನು ಮಾಡಿದ್ದೇವೋ ಆ ಬಗ್ಗೆ ಹೆಮ್ಮೆ ಇದೆ ಎಂದು ಇನ್ಸ್ಟಾಗ್ರಾಂ ಖಾತೆಯಲ್ಲಿ ಯಶ್ ಜೊತೆಗಿನ ಫೋಟೋ ಶೇರ್ ಮಾಡಿ ಜೆಜೆ ಪೆರ್ರಿ ಬರೆದುಕೊಂಡಿದ್ದಾರೆ.

ಯಶ್ ಕೆಜಿಎಫ್ ಫ್ರಾಂಚೈಸಿಯಡಿ ಪೆರ್ರಿ ಅವರ ಪೋಸ್ಟ್ಗೆ ಹೀಗೆ ಪ್ರತಿಕ್ರಿಯೆ ನೀಡಿದ್ದಾರೆ. “ಗೆಳೆಯ, ನಿಮ್ಮ ಜತೆ ಕೆಲಸ ಮಾಡಿದ್ದು ಉತ್ತಮ ಅನುಭವವಾಗಿದೆ. ರಾ ಪವರ್” ಎಂದು ಯಶ್ ಪ್ರತಿಕ್ರಿಯೆ ನೀಡಿದ್ದಾರೆ.
