ಬೆಂಗಳೂರು : ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಅತ್ಯಂತ ಹೆಚ್ವು ಮತಗಳನ್ನು ಗಳಿಸಿದ್ದ ಎಚ್.ಎಸ್.ಮಂಜುನಾಥ್ ಅವರು ಈಗಾಗಲೇ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಸೋಮವಾರ ನಡೆಯಲಿರುವ ರಾಜ್ಯ ನೂತನ ಯುವ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಲು ಹಲವು ಸಚಿವರು ರಾಜಕೀಯ ನಾಯಕರು ಮುಖಂಡರುಗಳಿಗೆ ಖುದ್ದು ಎಚ್.ಎಸ್. ಮಂಜುನಾಥ್ ಅವರೇ ಆಹ್ವಾನ ನೀಡುತ್ತಿದ್ದಾರೆ.

ಇಂದು ಬೆಂಗಳೂರಿನ ಗೃಹಕಚೇರಿಗೆ ಭೇಟಿ ನೀಡಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸನ್ಮಾನಿಸಿ, ಸೋಮವಾರ ನಡೆಯಲಿರುವ ಪದಗ್ರಹಣ ಸಮಾರಂಭಕ್ಕೆ ಆಹ್ವಾನ ನೀಡಿದ್ದಾರೆ. ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.


Author: Btv Kannada
Post Views: 45