ಬೆಂಗಳೂರು : ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದ್ದು, ಈ ಪ್ರಕರಣವನ್ನು ಸಿಬಿಐ, ಡಿಆರ್ಐ ತನಿಖೆ ನಡೆಸುತ್ತಿದೆ. ನಟಿ ರನ್ಯಾ ರಾವ್ ಪರಪ್ಪನ ಅಗ್ರಹಾರ ಸೇರಿದ್ದು, ಇದೀಗ ಗೋಲ್ಡ್ ಸ್ಮಗ್ಲಿಂಗ್ ಕೇಸ್ನ ಎರಡನೇ ಆರೋಪಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಗೋಲ್ಡ್ ಸ್ಮಗ್ಲಿಂಗ್ ಕೇಸ್ನ ಎರಡನೇ ಆರೋಪಿ ತರುಣ್ ರಾಜ್ನ್ನು DRI ಅಧಿಕಾರಿಗಳು ನ್ಯಾಯಾಧೀಶರ ಮನೆಯಲ್ಲಿ ಇಂದು ವಿಚಾರಣೆಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿ ತರುಣ್ ರಾಜ್ನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸದ್ಯ ತರುಣ್ ಕೊಂಡೂರು ರಾಜು ಪರಪ್ಪನ ಆಗ್ರಹಾರ ಜೈಲು ಸೇರಿದ್ದಾನೆ.

Author: Btv Kannada
Post Views: 24