ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು!

ಮುಂಬೈ : ಮುಂಬೈ-ಅಮರಾವತಿ ಎಕ್ಸ್​ಪ್ರೆಸ್​ ರೈಲು ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಬೋದ್​ವಡ್ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

ರೈಲ್ವೆ ಕ್ರಾಸಿಂಗ್​ನಲ್ಲಿ ಗೇಟ್ ಹಾಕಿದ್ದರೂ ಕೂಡ ವೇಗವಾಗಿ ಬಂದ ಲಾರಿ ರೈಲ್ವೆ ಹಳಿಗಳ ಮಧ್ಯೆ ಸಿಲುಕಿಕೊಂಡಿತ್ತು. ಆಗ ರೈಲು ಲಾರಿಗೆಗೆ ಡಿಕ್ಕಿ ಹೊಡೆದಿದ್ದು, ಲಾರಿ ಚಾಲಕ ಅಥವಾ ರೈಲಿನಲ್ಲಿದ್ದ ಯಾವುದೇ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಈ ಮಾರ್ಗದಲ್ಲಿ 6 ಗಂಟೆಗಳ ಕಾಲ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು.

Btv Kannada
Author: Btv Kannada

Leave a Comment

Read More

01:36