ಬೆಂಗಳೂರು : ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಗೆ ರಿಲೀಫ್ ಸಿಕ್ಕಿದ್ದು, ಕಾಗ್ನಿಜೆನ್ಸ್, ಸಮನ್ಸ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿ ಆದೇಶಿಸಿದೆ.
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಮಾರ್ಚ್ 15 ರಂದು ಖುದ್ದು ಹಾಜರಾಗುವಂತೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಸಮನ್ಸ್ ನೀಡಿತ್ತು. ಈ ಸಮನ್ಸ್ ರದ್ದುಗೊಳಿಸುವಂತೆ ಕೋರಿ ಬಿ.ಎಸ್ ಯಡಿಯೂರಪ್ಪ ಹೈಕೋರ್ಟ್ ಮೊರೆ ಹೋಗಿದ್ದರು.
ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಪೀಠದಲ್ಲಿ ಈ ಅರ್ಜಿ ವಿಚಾರಣೆ ನಡೆಯಿತು. ಮಾಜಿ ಸಿಎಂ ಬಿಎಸ್ ವೈ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಿದರು. ಇದೀಗ ಹೈಕೋರ್ಟ್ ನ್ಯಾಯಪೀಠವು ಕಾಗ್ನಿಜೆನ್ಸ್, ಸಮನ್ಸ್ ಆದೇಶಕ್ಕೆ ತಡೆ ನೀಡಿದ್ದು, ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ.

Author: Btv Kannada
Post Views: 21