ಸ್ವಂತ ವಾಹನದ ಮೇಲೆ ‘ಪೊಲೀಸ್’ ಎಂದು ಬರೆಸುವಂತಿಲ್ಲ – ಕರ್ನಾಟಕ ಪೊಲೀಸರಿಗೆ ಪರಮೇಶ್ವ‌ರ್ ಕಟ್ಟುನಿಟ್ಟಿನ ಸೂಚನೆ!

ಬೆಂಗಳೂರು : ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಪೊಲೀಸ್ ಇಲಾಖೆ ಕಚೇರಿಗಳಲ್ಲಿ ಕೆಲಸ ಮಾಡುವವರು ತಮ್ಮ ಸ್ವಂತ ವಾಹನದ ಮೇಲೆ ‘ಪೊಲೀಸ್’ ಎಂದು ಬರೆಸುವಂತಿಲ್ಲ. ಒಂದು ವೇಳೆ ಬರೆಸಿದ್ದರೆ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವ‌ರ್ ಅವರು ಸ್ಪಷ್ಟಪಡಿಸಿದ್ದಾರೆ.

ವಿಧಾನಮಂಡಲ ಅಧಿವೇಶನದಲ್ಲಿ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 561ಕ್ಕೆ ಲಿಖಿತ ರೂಪದಲ್ಲಿ ಸಚಿವ ಡಾ.ಜಿ.ಪರಮೇಶ್ವರ್ ಅವರು ಈ ಉತ್ತರ ನೀಡಿದ್ದಾರೆ.

ರಾಜ್ಯದ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್‌ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ರಾಜ್ಯದ ಪೊಲೀಸ್‌ ಇಲಾಖೆಯ ಅಧಿಕಾರಿಗಳು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹೇಳಿದ್ದಾರೆ.

ಹಾಗಿದ್ದಲ್ಲಿ, ಸ್ವಂತ ವಾಹನಗಳ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಕೆಲ ಪೊಲೀಸ್ ನೌಕರರು ಮತ್ತು ಅಧಿಕಾರಿಗಳು ಕಾನೂನಿನ ಉಲ್ಲಂಘನೆ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಬಂದಿದ್ದಲ್ಲಿ, ಇವರ ವಿರುದ್ಧ ಸರ್ಕಾರವು ತೆಗೆದುಕೊಂಡಿರುವ ಕ್ರಮಗಳೇನು? ಎಂಬ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವ‌ರ್ ಅವರು, ತಮ್ಮಸ್ವಂತ ವಾಹನಗಳ ಮೇಲೆ ಪೊಲೀಸ್‌ ಎಂದು ಬರೆಯಿಸಿಕೊಂಡಿರುವುದು ಗೃಹ ಇಲಾಖೆಯ ಗಮನಕ್ಕೆ ಬಂದಿದೆ. ಸ್ವಂತ ವಾಹನದ ಮೇಲೆ ಪೊಲೀಸ್‌ ಅಧಿಕಾರಿಗಳು ಹಾಗೂ ನೌಕರರು ಪೊಲೀಸ್‌ ಎಂದು ಬರೆಸಿದ್ದರೆ ಅವರ ವಿರುದ್ಧ 2022ರ ಸರ್ಕಾರದ ಸುತ್ತೋಲೆ ಪ್ರಕಾರ ಕಾನೂನು ಕ್ರಮ ಆಗುತ್ತದೆ ಎಂದು ಕನಾ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Btv Kannada
Author: Btv Kannada

Leave a Comment

Read More

02:27