ಚಿನ್ನ-ಬೆಳ್ಳಿ ದರ ಮತ್ತೆ ಏರಿಕೆ – ಇವತ್ತಿನ ರೇಟ್ ಎಷ್ಟು?

ಇತ್ತೀಚೆಗೆ ಇಳಿಕೆಯಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೆ ಏರಿಕೆಯಾಗುತ್ತಿದೆ. ಕೆಲ ದಿನಗಳ ಹಿಂದೆ ಸ್ವಲ್ಪ ಮಟ್ಟಿಗೆ ಕುಸಿತ ಕಂಡಿದ್ದ ಬೆಲೆಗಳು ಈಗ ಮತ್ತೆ ಹೆಚ್ಚಾಗಿದ್ದು, ಇದರಿಂದ ಗ್ರಾಹಕರಿಗೆ ಚಿಂತೆ ಶುರುವಾಗಿದೆ.

ನಿನ್ನೆ 230 ರೂಗಳಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ ಇಂದು 180-200 ರೂಗಳಷ್ಟು ಹೆಚ್ಚಳಗೊಂಡಿದೆ. ಈ ವಾರದ ಹೆಚ್ಚಿನ ದಿನಗಳು ಬಂಗಾರದ ಬೆಲೆಯಲ್ಲಿ ಏರಿಕೆ ಆಗಿದೆ. ವಿದೇಶಗಳಲ್ಲಿ ಏರಿಳಿತಗಳು ಹೆಚ್ಚಿವೆ.

ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 1,38,350 ರೂ. ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,50,930 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 25,000 ರೂ. ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂ​ಗೆ 1,38,350 ರೂ. ಆಗಿದೆ, ಬೆಳ್ಳಿ ಬೆಲೆ 100 ಗ್ರಾಂ​ಗೆ 25,000 ರೂಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ :
  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,093 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,835 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,320 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,093 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,835 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ
Btv Kannada
Author: Btv Kannada

Leave a Comment

Read More

Read More