ಚಿತ್ರದುರ್ಗ : ಚಿತ್ರದುರ್ಗದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಬಲೆ ಬೀಸಿದ್ದು, ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಸುಶೀಲಮ್ಮಗೆ ಸೇರಿದ ಮನೆ ಹಾಗೂ ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.

ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಸುಶೀಲಮ್ಮ ವಿರುದ್ಧ ಆದಾಯ ಮೀರಿ ಹಣ, ಆಸ್ತಿ ಗಳಿಕೆ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ.

ಅಕೌಂಟೆಂಟ್ ಆಗಿದ್ದ ವೇಳೆ ಸುಶೀಲಮ್ಮ ಭ್ರಷ್ಟಾಚಾರ ಎಸಗಿದ್ದಾರೆ ಎಂಬ ಆರೋಪವಿದೆ. ಇದೀಗ ಸುಶೀಲಮ್ಮನ ಚಿತ್ರದುರ್ಗದ ಮೆದೇಹಳ್ಳಿ ಬಡಾವಣೆಯ ಮನೆ, ಯಾದಲಘಟ್ಟ ಗ್ರಾಮದ ತೋಟದ ಮನೆ ಮೇಲೆ ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆದಿದೆ.
ಇದನ್ನೂ ಓದಿ : ಪೊಲೀಸ್ ವಸತಿಗೃಹದ ಜಾಗಕ್ಕೆ ಕನ್ನ – ಬಿಜೆಪಿ ಮುಖಂಡ ಶ್ರೀನಾಥ್ ನಗರಗದ್ದೆ ಸೇರಿ ಮೂವರು ಅರೆಸ್ಟ್!
Author: Btv Kannada
Post Views: 280









