ಜಯಮೃತ್ಯುಂಜಯ ಸ್ವಾಮೀಜಿಗೆ ಬ್ಲ್ಯಾಕ್‌ಮೇಲ್ – ಯುವತಿ ವಿರುದ್ಧ FIR ದಾಖಲು!

ಬೆಂಗಳೂರು : ಬಿಜಾಪುರದ ಜಯಮೃತ್ಯುಂಜಯ ಸ್ವಾಮೀಜಿಗೆ ಬೆಂಗಳೂರಿನ ಯುವತಿಯೊಬ್ಬಳು ನಕಲಿ ಸಿಡಿ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿದ್ದಾಳೆ. ಈ ಸಂಬಂಧ ಬಸವ ಮೃತ್ಯುಂಜಯ ಸ್ವಾಮೀಜಿ ಬಿಜಾಪುರದಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.

3 ಕೋಟಿ ರೂ. ಕೊಡುವಂತೆ ಯುವತಿ ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿಗೆ ಬ್ಲ್ಯಾಕ್‌ಮೇಲ್ ಮಾಡಿದ್ದಾಳೆ. ಎಫ್ಐಆರ್ ದಾಖಲಾದ ಬೆನ್ನಲ್ಲೇ ಮಹಿಳೆ ಹಾಗೂ ಇತರ ನಾಲ್ವರ ಬಂಧನಕ್ಕೆ ಬಿಜಾಪುರದ ವಿಶೇಷ ತಂಡ ಕಾರ್ಯಾಚರಣೆ ನಡೆಸಿದೆ.

ಗ್ಯಾಂಗ್​ವೊಂದು ನಕಲಿ ಸಿಡಿ ಇಟ್ಟುಕೊಂಡು ಜಯಮೃತ್ಯುಂಜಯ ಸ್ವಾಮೀಜಿಯನ್ನು ಬ್ಲಾಕ್ ಮೇಲ್ ಮಾಡುತ್ತಿತ್ತು. ಕಳೆದ ಎರಡು ತಿಂಗಳಿಂದ ಜಯ ಮೃತ್ಯುಂಜಯ ಸ್ವಾಮೀಜಿಯನ್ನು ಹಲವರು ಟಾರ್ಗೆಟ್ ಮಾಡುತ್ತಿದ್ದು, ಇದೀಗ ಬ್ಲ್ಯಾಕ್‌ಮೇಲ್ ಮಾಡಿರುವವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ : ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ – ಅಳಿಯನಿಗೆ ಕೊಡವ ಶೈಲಿಯ ಭರ್ಜರಿ ಆತಿಥ್ಯ!

Btv Kannada
Author: Btv Kannada

Leave a Comment

Read More

Read More