ಬೆಂಗಳೂರು : ಚಿನ್ನ ಬೆಳ್ಳಿ ದರದಲ್ಲಿ ನಿರಂತರವಾಗಿ ಏರಿಳಿತ ಆಗುತ್ತಿದ್ದು, ಸತತ ಮೂರು ವಾರಗಳ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಮೇಲಿನ ಯುದ್ಧಕ್ಕೆ 2 ಕದನ ವಿರಾಮ ಘೋಷಣೆ ಮಾಡುತ್ತಿದ್ದಂತೆಯೇ ಕಚ್ಚಾ ತೈಲದ ಬೆಲೆ ಭರ್ಜರಿ ಕುಸಿತ ಕಂಡಿದೆ. ಅಲ್ಲದೆ ಚಿನ್ನ ಮತ್ತು ಬೆಳ್ಳಿ ಬೆಲೆಯು ಭರ್ಜರಿ ಹೆಚ್ಚಳವಾಗಿದೆ.

24 ಕ್ಯಾರೆಟ್ ಚಿನ್ನದ ಬೆಲೆ : ಏಪ್ರಿಲ್ 8 ರಂದು 24 ಕ್ಯಾರೆಟ್ ಚಿನ್ನದ ಬೆಲೆ ಭಾರೀ ಹೆಚ್ಚಳವಾಗಿದೆ. 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 15,382 ರೂ. ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,53,820 ರೂ. ಆಗಿದೆ. ಏ.7ಕ್ಕೆ ಹೋಲಿಕೆ ಮಾಡಿದರೆ 24 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 398 ರೂ. ಹಾಗೂ 10 ಗ್ರಾಂಗೆ 3,980 ರೂ. ಏರಿಕೆಯಾಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ : 22 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭಾರೀ ಹೆಚ್ಚಳವಾಗಿದೆ. 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 14,100 ರೂ. ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,41,000 ರೂ. ಆಗಿದೆ. ಏ.7ಕ್ಕೆ ಹೋಲಿಕೆ ಮಾಡಿದರೆ 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆ 365 ರೂ. ಹಾಗೂ 10 ಗ್ರಾಂನ ಮೇಲೆ 3,650 ರೂ. ಹೆಚ್ಚಳವಾಗಿದೆ.

18 ಕ್ಯಾರೆಟ್ ಚಿನ್ನದ ಬೆಲೆ : ಇನ್ನು 24 ಕ್ಯಾರೆಟ್ ಹಾಗೂ 22 ಕ್ಯಾರೆಟ್ ಚಿನ್ನದ ಬೆಲೆಯಂತೆಯೇ 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭಾರೀ ಹೆಚ್ಚಳವಾಗಿದೆ. 18 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 11,537 ರೂ. ಹಾಗೂ 10 ಗ್ರಾಂನ ಮೇಲೆ 1,15,370 ರೂ. ಆಗಿದೆ. 18 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 299 ರೂ. ಹಾಗೂ 10 ಗ್ರಾಂನ ಮೇಲೆ 2,990 ರೂ. ಹೆಚ್ಚಳವಾಗಿದೆ.
ಚಿನ್ನದೊಂದಿಗೆ ಬೆಳ್ಳಿಯ ಬೆಲೆಯಲ್ಲೂ ಭಾರೀ ಹೆಚ್ಚಳವಾಗಿದೆ. ಒಂದು ಗ್ರಾಂ ಬೆಳ್ಳಿಗೆ 10 ರೂ. ಏರಿಕೆಯಾಗಿದೆ. ಈ ಮೂಲಕ ಒಂದು ಗ್ರಾಂ ಬೆಲೆ 260 ರೂ. ಹಾಗೂ ಒಂದು ಕೆ.ಜಿ ಬೆಳ್ಳಿ ಬೆಲೆ 2.60 ಲಕ್ಷ ರೂ. ಆಗಿದೆ. ಏ.7 ರಂದು ಬೆಳ್ಳಿ ಬೆಲೆ ಕೇಜಿಗೆ 2,50,000 ರೂ. ಇತ್ತು.
ಇದನ್ನೂ ಓದಿ : ಲೋಕಾಯುಕ್ತ ಭರ್ಜರಿ ಬೇಟೆ – 31.28 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ!








