ಬೆಂಗಳೂರು : ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಹೊಸ ರೈಲು ಕೆಎಸ್ಆರ್ ಬೆಂಗಳೂರು ಮತ್ತು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ನಡುವೆ ಚಲಿಸಲಿದೆ.
ವಂದೇ ಭಾರತ್ ಸ್ಲೀಪರ್ ರೈಲಿಗೆ ಸಂಸದ ಪಿ.ಸಿ.ಮೋಹನ್ ಬೇಡಿಕೆ ಇಟ್ಟಿದ್ದರು. ಸಂಸದರಿಗೆ ಪತ್ರ ಬರೆದು ಹೊಸ ಟ್ರೈನ್ಗೆ ಸಿಕ್ಕ ಬಗ್ಗೆ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ.

ಡಿಸೆಂಬರ್ 2 ರಂದು ನೈಋತ್ಯ ಕಾರ್ಯಕ್ರಮ (SWR) ಸ್ಥಾಯಿ ಸಮಿತಿಯ ಅಧ್ಯಯನ ಭೇಟಿಯ ಸಂದರ್ಭದಲ್ಲಿ ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್ ಈ ವಿಷಯವನ್ನು ತಿಳಿಸಿದ್ದಾರೆ. SMVT ಬೆಂಗಳೂರು ಮೂಲ/ಅಂತ್ಯ ನಿಲ್ದಾಣವಾಗಿ ವಂದೇ ಭಾರತ್ ಸ್ಲೀಪರ್ ರೈಲಿಗೆ ಅವರು ಒತ್ತಾಯಿಸಿದ್ದರು.
ಈಗ ಇರುವ ರೈಲುಗಳು 24-30 ಗಂಟೆಗಳನ್ನು ತೆಗೆದುಕೊಳ್ಳುತ್ತವೆ. ಆದರೆ, ಬಸ್ಗಳು 16-18 ಗಂಟೆಗಳನ್ನು ತೆಗೆದುಕೊಳ್ಳುತ್ತವೆ. ನಮಗೆ ಬಸ್ನಷ್ಟು ವೇಗದ ರೈಲು ಬೇಕು ಎಂದು ತಿಳಿಸಿದ್ದರು.
ಇದನ್ನೂ ಓದಿ : ಕೆಡಿ ಸಿನಿಮಾದ “ನುಗ್ಗಿ ಹೊಡಿ” ಸಾಂಗ್ ರಿಲೀಸ್ – ಮಾಸ್ ಪ್ರೇಕ್ಷಕರ ಮನಗೆದ್ದ ರೌಡಿಸಂ ಹಾಡು!











