ಮಂಡ್ಯ : ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನಿರ್ಮಾಣಗೊಂಡಿರುವ ‘ಶ್ರೀ ಗುರು ಭೈರವೈಕ್ಯ ಮಂದಿರ’ವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿದ್ದಾರೆ.
ಇಂದು ಮಂಡ್ಯಗೆ ಆಗಮಿಸಿ ಪ್ರಧಾನಿ ಮೋದಿ ಮಠದಲ್ಲಿ ಭೈರವೈಕ್ಯ ಮಂದಿರ ಲೋಕಾರ್ಪಣೆ ಮಾಡಿದರು. ಬಳಿಕ ಕಾಲಭೈರವೇಶ್ವರನಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದರು. ಈ ವೇಳೆ ಪ್ರಧಾನಿ ಮೋದಿಗೆ ಆದಿಚುಂಚನಗಿರಿ ಶ್ರೀಗಳು ತಿಲಕವಿಟ್ಟು ಆಶೀರ್ವದಿಸಿದರು.
1800 ವರ್ಷಗಳ ಇತಿಹಾಸ ಹೊಂದಿರುವ, ಬಾಲಗಂಗಾಧರನಾಥ ಸ್ವಾಮೀಜಿಗಳ ಐಕ್ಯ ಸ್ಥಳವೂ ಆಗಿದ್ದು, ಗದ್ದುಗೆ ಸ್ಥಳದಲ್ಲಿ ನಿರ್ಮಾಣವಾದ, ದ್ರಾವಿಡ ಶೈಲಿಯ, ಹೊಯ್ಸಳ, ಚಾಲುಕ್ಯ, ಚೋಳ ದ್ರಾವಿಡ ಶೈಲಿಯನ್ನು ಒಳಗೊಂಡ ದೇವಾಲಯವನ್ನು ಮೋದಿ ಉದ್ಘಾಟನೆ ಮಾಡಿದರು.
ದೇಗುಲ ಉದ್ಘಾಟನೆ ಬಳಿಕ ಭೈರವೈಕ್ಯ ಬಾಲಗಂಗಾಧರನಾಥ ಶ್ರೀ ಮೂರ್ತಿಗೆ ಮೋದಿ ಪುಷ್ಪಾರ್ಚನೆ ಸಲ್ಲಿಸಿದರು. ನಂತರ ದೇಗುಲ ವೀಕ್ಷಿಸಿದರು. ಈ ವೇಳೆ, ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ ಪ್ರಧಾನಿಗೆ ಸಾಥ್ ನೀಡಿದರು.
ಇದನ್ನೂ ಓದಿ : ಆದಿಚುಂಚನಗಿರಿ ಮಠಕ್ಕೆ ಇಂದು ಪ್ರಧಾನಿ ಮೋದಿ ಭೇಟಿ – ಎಲ್ಲೆಡೆ ಬಿಗಿ ಭದ್ರತೆ!









