ನನ್ನ ಭವಿಷ್ಯ ಮುಗಿದಿದೆ ಬಿಡಿ, ರಾಜ್ಯದ ಭವಿಷ್ಯಕ್ಕಾಗಿ ಕಾರ್ಯಕರ್ತರು ದುಡಿಮೆ ಮಾಡಿ – HD ಕುಮಾರಸ್ವಾಮಿ!

ಬೆಂಗಳೂರು : ಜೆಡಿಎಸ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಅವರು ಅಚ್ಚರಿಯ ಹೇಳಿಕೆಗಳನ್ನು ನೀಡಿದ್ದಾರೆ. ಕುಮಾರಣ್ಣನ ಭವಿಷ್ಯ ಬಿಡಿ, ಕುಮಾರಣ್ಣನ ಭವಿಷ್ಯ ಮುಗಿದು ಹೋಗಿದೆ. ರಾಜ್ಯದ ಜನರ ಭವಿಷ್ಯಕ್ಕಾಗಿ ಕಾರ್ಯಕರ್ತರು ದುಡಿಮೆ ಮಾಡಿ ಎಂದಿದ್ದಾರೆ.

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಆಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ನನ್ನ ವೈಭವೀಕರಣ ಬೇಡ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಜೆಡಿಎಸ್‌ ಪಕ್ಷದ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ದೇವರ ದಯೆಯಿಂದ, ಎರಡು ಬಾರಿ ಈ ರಾಜ್ಯಕ್ಕೆ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಪೂರ್ಣಪ್ರಮಾಣದ ಬಹುಮತ ಇಲ್ಲದಿದ್ದರೂ ಸಾಧ್ಯವಾದಷ್ಟು ಒಳ್ಳೆಯ ಕೆಲಸಗಳನ್ನು ಮಾಡಿದ್ದೇನೆ. ಸಮಾಜದ ಎಲ್ಲಾ ವರ್ಗದ ಜನರನ್ನು ಸಮಾನ ದೃಷ್ಟಿಯಲ್ಲಿ ನೋಡಿದ್ದೇನೆ.

ನೀವು ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಶುಭ ಹಾರೈಸುವುದು, ನನ್ನ ಮೇಲೆ ಇಟ್ಟಿರುವ ಪ್ರೀತಿ ಮತ್ತು ನಂಬಿಕೆಯನ್ನು ಸೂಚಿಸುತ್ತದೆ. ಇಂತಹ ವೇದಿಕೆಯಲ್ಲಿ ರಾಜಕೀಯ ಮಾತನಾಡುವುದು ಬೇಡ ಎಂದು ಅವರು ಮುಖಂಡರು ಮತ್ತು ಕಾರ್ಯಕರ್ತರಿಗೆ ಸೂಚಿಸಿದರು.

ಇನ್ಮುಂದೆ ವಾರದಲ್ಲಿ ಎರಡು ದಿನ ಕರ್ನಾಟಕದಲ್ಲೇ ಇರುತ್ತೇನೆ. ನಾನು ಮನಸ್ಸಿಂದ ಹೇಳ್ತಿದ್ದೇನೆ, ರಾಜ್ಯಕ್ಕೆ ಒಳ್ಳೆಯದು ಆಗಬೇಕಂದ್ರೆ ಜೆಡಿಎಸ್ ಅನಿವಾರ್ಯ ಎಂದು ಕುಮಾರಸ್ವಾಮಿ ಹೇಳಿದ್ರು.

ಮೋದಿಯವರ ನಾಯಕತ್ವದಲ್ಲಿ ಮಹಿಳೆಯರಿಗೆ ಶೇ. 33 ರಷ್ಟು. 42 ಕ್ಷೇತ್ರಗಳು ನಮ್ಮ ರಾಜ್ಯದಲ್ಲಿ ಲೋಕಸಭೆ ಕ್ಷೇತ್ರಗಳು ಬರಲಿವೆ. ಈ 42 ಲೋಕಸಭೆ ಕ್ಷೇತ್ರಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ಸಿಗಲಿದೆ ಎಂದಿದ್ದಾರೆ.

ಇದನ್ನೂ ಓದಿ : ಆದಿಚುಂಚನಗಿರಿ ಮಠಕ್ಕೆ ಇಂದು ಪ್ರಧಾನಿ ಮೋದಿ ಭೇಟಿ – ಎಲ್ಲೆಡೆ ಬಿಗಿ ಭದ್ರತೆ!

Btv Kannada
Author: Btv Kannada

Leave a Comment

Read More

Read More