ನವದೆಹಲಿ : ಮಹಿಳಾ ಮೀಸಲಾತಿ ಮಸೂದೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಇಂದು ಮಾತನಾಡಿದರು. ಮಹಿಳೆಯರಿಗೆ ಶೇಕಡಾ 33ರಷ್ಟು ರಾಜಕೀಯ ಮೀಸಲಾತಿ ನೀಡಿದ ಬಳಿಕ ದೇಶವು ಮತ್ತಷ್ಟು ಅಭಿವೃದ್ಧಿಯಾಗಲಿದೆ. ಮಹಿಳಾ ಮೀಸಲಾತಿಗೆ ರಾಜಕೀಯದ ಬಣ್ಣ ಬಳಿಯುವ ಅಗತ್ಯವಿಲ್ಲ ಎಂದು ಹೇಳಿರುವ ಪ್ರಧಾನಿ ಮೋದಿ ಈ ಕಾಯ್ದೆಯನ್ನು 25-30 ವರ್ಷಗಳ ಹಿಂದೆಯೇ ಜಾರಿಗೊಳಿಸಬೇಕಿತ್ತು ಎಂದಿದ್ದಾರೆ.
ನಾವು ಭಾರತೀಯರು ರಾಷ್ಟ್ರಕ್ಕೆ ಹೊಸ ದಿಕ್ಕು ನೀಡಲು ಒಗ್ಗೂಡುತ್ತಿದ್ದೇವೆ. ನಮ್ಮ ಆಡಳಿತ ವ್ಯವಸ್ಥೆಯನ್ನು ಬಲಪಡಿಸಲು ನಾವು ಅರ್ಥಪೂರ್ಣ ಪ್ರಯತ್ನ ಮಾಡುತ್ತಿದ್ದೇವೆ. ನಮ್ಮ ಆಡಳಿತ ವ್ಯವಸ್ಥೆಯನ್ನು ಬಲಪಡಿಸಲು ನಾವು ಅರ್ಥಪೂರ್ಣ ಪ್ರಯತ್ನ ಮಾಡುತ್ತಿದ್ದೇವೆ. ಭಾರತ ಪ್ರಜಾಪ್ರಭುತ್ವದ ತಾಯಿ. ಈ ಅಭಿವೃದ್ಧಿಯ ಪ್ರಯಾಣದಲ್ಲಿ ಹೊಸ ಆಯಾಮವನ್ನು ಸೇರಿಸಲು ನಮಗೆ ಪವಿತ್ರವಾದ ಅವಕಾಶ ನೀಡಲಾಗಿದೆ. ರಾಷ್ಟ್ರ ನಿರ್ಮಾಣದ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ದೇಶದ ಅರ್ಧದಷ್ಟು ಜನಸಂಖ್ಯೆಯಾದ ಮಹಿಳೆಯರನ್ನು ಸೇರಿಸಿಕೊಳ್ಳುವ ಅವಕಾಶ ನಮಗೆ ಸಿಕ್ಕಿರುವುದು ನಮ್ಮ ಅದೃಷ್ಟ ಎಂದು ಮೋದಿ ಹೇಳಿದ್ದಾರೆ.
ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾದರೆ, ಇದು ಎಲ್ಲರಿಗೂ, ಇಡೀ ರಾಷ್ಟ್ರಕ್ಕೆ ಸಾಮೂಹಿಕ ಯಶಸ್ಸು. ಇದು ಯಾವುದೇ ಒಂದು ಪಕ್ಷಕ್ಕೆ ಸಿಕ್ಕ ವಿಜಯವಾಗಿರುವುದಿಲ್ಲ. ಹೀಗಾಗಿ ಈ ಮಸೂದೆಗೆ ರಾಜಕೀಯ ಬಣ್ಣ ನೀಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : SSLC ಪರೀಕ್ಷೆಯಲ್ಲಿ ಹಿಂದಿಗೆ ಗ್ರೇಡ್ ಬೇಡ, ಅಂಕ ಕೊಡಿ – ಹೈಕೋರ್ಟ್ ಆದೇಶ!








