ಬೆಂಗಳೂರು : ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯವು ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ನೀಡಿದೆ.
ವಿನಯ್ ಕುಲಕರ್ಣಿ 15 ನೇ ಅಪರಾಧಿ ಆಗಿದ್ದು, ಒಟ್ಟು 16 ಮಂದಿಗೂ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. ಕೊಲೆ ಮತ್ತು ಪಿತೂರಿ ಆರೋಪಕ್ಕೆ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯನ್ನು ನ್ಯಾಯಾಲಯ ವಿಧಿಸಿದೆ. ಅಲ್ಲದೆ, ಯೋಗೀಶ್ ಗೌಡ ಮಕ್ಕಳಿಗೆ 16 ಲಕ್ಷ ಪರಿಹಾರ ನೀಡಲು ವಿನಯ್ ಕುಲಕರ್ಣಿಗೆ ಆದೇಶ ನೀಡಿದೆ.
ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿ ಆರೋಪಿಗಳು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದೆ. ನ್ಯಾಯಾಲಯದ ಅದೇಶದ ಬೆನ್ನಲ್ಲೇ ಸಿಬಿಐ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದುಕೊಂಡಿತ್ತು.
ಈಗಾಗಲೇ ಅವರನ್ನು ಹಾಗೂ ಇತರ ಅಪರಾಧಿಗಳನ್ನು ಪರಪ್ಪನ ಅಗ್ರಹಾರಕ್ಕೆ ವರ್ಗಾವಣೆ ಮಾಡಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ್ ಭಟ್ ಅವರು ಈ ಮಹತ್ವದ ತೀರ್ಪು ನೀಡಿದ್ದರು.
ಇದನ್ನೂ ಓದಿ :“ಶ್ರೀಜಗನ್ನಾಥದಾಸರು ಭಾಗ 2” ಚಿತ್ರಕ್ಕೆ 50 ದಿನಗಳ ಸಂಭ್ರಮ – ಆಶೀರ್ವದಿಸಿದ ಶ್ರೀಸತ್ಯಾತ್ಮ ತೀರ್ಥರು!









