ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ 99 ಅಡಿಗೆ ಕುಸಿತ – ಕಾದಿದೆಯೇ ಜಲಕ್ಷಾಮ?

ಮಂಡ್ಯ : ಮಂಡ್ಯದ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಬೇಸಿಗೆ ಆರಂಭದಲ್ಲೇ ಆತಂಕಕಾರಿ ಮಟ್ಟಕ್ಕೆ ಕುಸಿದಿದೆ. ಜಲಾಶಯದ ಇಂದಿನ ನೀರಿನ ಮಟ್ಟ 100 ಅಡಿಗಿಂತ ಕೆಳಕ್ಕೆ ಅಂದರೆ 99 ಅಡಿಗೆ ಕುಸಿದಿದ್ದು, ಮಳೆಗಾಲ ವಿಳಂಬವಾದರೆ ಕುಡಿಯುವ ನೀರಿಗಾಗಿ ದೊಡ್ಡ ಮಟ್ಟದ ಹಾಹಾಕಾರ ಎದುರಾಗುವ ಭೀತಿ ಆವರಿಸಿದೆ.

ಬೆಂಗಳೂರಿನ ಹಲವೆಡೆ ಈಗಾಗಲೇ ನೀರಿನ ಸಮಸ್ಯೆ ಶುರುವಾಗಿದ್ದು, ಕೆಆರ್​ಎಸ್​ ಜಲಾಶಯದಲ್ಲಿ ನೀರಿನ ಮಟ್ಟ ಇಳಿಕೆಯಾಗಿರುವುದು ಇನ್ನಷ್ಟು ಸಮಸ್ಯೆಗೆ ಕಾರಣವಾಗಲಿದೆ.

124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಡ್ಯಾಂನಲ್ಲಿ ಸದ್ಯ ಕೇವಲ 22 ಟಿಎಂಸಿ ಮಾತ್ರ ನೀರು ಶೇಖರಣೆ ಇದೆ. ಇದರಲ್ಲಿ 7 ಟಿಎಂಸಿ ನೀರು ಡೆಡ್ ಸ್ಟೋರೇಜ್ ಆಗಿದ್ದು, ಬಳಕೆಗೆ ಲಭ್ಯವಿರುವುದು ಕೇವಲ 15 ಟಿಎಂಸಿ ಮಾತ್ರ. ಪ್ರಸ್ತುತ ಜಲಾಶಯಕ್ಕೆ 66 ಕ್ಯೂಸೆಕ್ ಒಳಹರಿವು ಇದ್ದರೆ, ಹೊರಹರಿವು 4,388 ಕ್ಯೂಸೆಕ್ ಇದೆ.

ಕಾವೇರಿ ನೀರನ್ನೇ ನಂಬಿಕೊಂಡಿರುವ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಮೈಸೂರು, ಮಂಡ್ಯ ಮತ್ತು ಇತರ ನಗರಗಳಿಗೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ದಟ್ಟವಾಗಿದೆ. ಸದ್ಯ ಲಭ್ಯವಿರುವ ನೀರನ್ನು ಕಟ್ಟು ಪದ್ಧತಿಯಲ್ಲಿ ಬೆಳೆಗೆ ನೀಡಬೇಕಿದೆ ಮತ್ತು ಕುಡಿಯಲು ಮೀಸಲಿಡಬೇಕಾದ ಅನಿವಾರ್ಯತೆ ಸರ್ಕಾರಕ್ಕೆ ಎದುರಾಗಿದೆ.

ಇದನ್ನೂ ಓದಿ : ವಿನಯ್ ಕುಲಕರ್ಣಿ ಕೇಸ್ – ಇನ್ಸ್‌ಪೆಕ್ಟರ್ ಚೆನ್ನಕೇಶವ ಟಿಂಗರೀಕರ್‌ಗೆ 7 ವರ್ಷ ಜೈಲು ಶಿಕ್ಷೆ!

Btv Kannada
Author: Btv Kannada

Leave a Comment

Read More

Read More