ಸಚಿವರ ಕಾಲಿಗೆ ಬಿದ್ದು ನಮಸ್ಕರಿಸಿದ ಪೊಲೀಸ್ ಕಾನ್ಸ್‌ಟೇಬಲ್ – ವಿಡಿಯೋ ವೈರಲ್!

ಕಲಬುರಗಿ : ಪೊಲೀಸ್ ಕಾನ್ಸ್‌ಟೇಬಲ್ ಸಚಿವರ ಕಾಲಿಗೆ ಬಿದ್ದು ನಮಸ್ಕರಿಸಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರ ಜನ್ಮದಿನದ ಅಂಗವಾಗಿ ಸೇಡಂನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಸೇಡಂ ಪಟ್ಟಣದಲ್ಲಿ ಕಳೆದ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್‌ಟೇಬಲ್ ಮಾರುತಿ ಎಂಬುವವರು ಸಚಿವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.

ಕಳೆದ ಕೆಲ ದಿನಗಳ ಹಿಂದಷ್ಟೇ ಕಾನ್ಸ್‌ಟೇಬಲ್ ಮಾರುತಿ ಅವರು ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದರು. ಇಂತಹ ಗೌರವಾನ್ವಿತ ಪದಕ ಪಡೆದ ಅಧಿಕಾರಿಯೊಬ್ಬರು, ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ರಾಜಕಾರಣಿಯೊಬ್ಬರ ಕಾಲಿಗೆ ಬಿದ್ದಿರುವುದು ಈಗ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ : ಶ್ರೀದೇವಿ ಸತ್ತ ಜಾಗದಲ್ಲೇ ಆತ್ಮದೊಂದಿಗೆ ಮಾತುಕತೆ – ನಟಿ ಸಾವಿನ ರಹಸ್ಯ ಬಯಲು!

Btv Kannada
Author: Btv Kannada

Leave a Comment

Read More

Read More