ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ಪರಪ್ಪನ ಅಗ್ರಹಾರದಿಂದ ನಟಿ ರನ್ಯಾ ರಾವ್ ರಿಲೀಸ್!

ಬೆಂಗಳೂರು : ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಸ್ಯಾಂಡಲ್​ವುಡ್ ನಟಿ ರನ್ಯಾ ರಾವ್ ಇಂದು ರಿಲೀಸ್ ಆಗಲಿದ್ದಾರೆ.

ಕಳೆದ ಒಂದು ವರ್ಷದಿಂದ ಪರಪ್ಪನ ಅಗ್ರಹಾರದಲ್ಲಿರುವ ರನ್ಯಾ ರಾವ್​ಗೆ ಈ ಹಿಂದೆಯೇ ಕೋರ್ಟ್​ ಜಾಮೀನು ನೀಡಿತ್ತು. ಆದರೆ ಕಾಫಿಪೋಸಾ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ರನ್ಯಾರಾವ್ ಜೈಲಲ್ಲಿಯೇ ಇದ್ದರು.

ಕಾಫಿಪೋಸಾ ಜಾರಿಯಾಗಿ ಇಂದಿಗೆ ಒಂದು ವರ್ಷವಾದ ಹಿನ್ನೆಲೆಯಲ್ಲಿ ರನ್ಯಾ ರಾವ್ ಇಂದು ಸಂಜೆ ವೇಳೆ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಲಿದ್ದಾರೆ.

ಏನಿದು ಪ್ರಕರಣ?

ರನ್ಯಾ ರಾವ್​ನ್ನು 2025ರ ಮಾರ್ಚ್​ 3ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ವಶಕ್ಕೆ ಪಡೆದಿತ್ತು. ಭಾರತೀಯ ಮಹಿಳಾ ಪ್ರಯಾಣಿಕರೊಬ್ಬರು ದುಬೈ, ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ ಬೆಂಗಳೂರಿಗೆ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಬೆಂಗಳೂರು ವಲಯ ಘಟಕದ DRI ಅಧಿಕಾರಿಗಳು ರನ್ಯಾ ರಾವ್‌ರನ್ನು ತಪಾಸಣೆ ಮಾಡಿದಾಗ, 102 ಕೋಟಿ ರೂ. ಚಿನ್ನ ಪತ್ತೆಯಾಗಿದ್ದು, ಅದನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

ಮಾರ್ಚ್ 4, 2025ರಂದು ರಾವ್ ಅವರನ್ನು ಬಂಧಿಸಿದ್ದ ಅಧಿಕಾರಿಗಳು ಮಾರ್ಚ್ 10ರಂದು ಕಸ್ಟಮ್ಸ್ ಕಾಯ್ದೆ, 1962ರ ಸೆಕ್ಷನ್ 108ರ ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದರು. ಬಳಿಕ ಮಾರ್ಚ್ 12ರಂದು ಅವರ ಸಹಚರ ತರುಣ್ ಕೊಂಡೂರು ರಾಜು ಹೇಳಿಕೆ ದಾಖಲಿಸಲಾಯಿತು. ಈ ಹೇಳಿಕೆಗಳ ಆಧಾರದ ಮೇಲೆ ಜೈನ್ ಅವರನ್ನು ಏಪ್ರಿಲ್ 7ರಂದು ಅಧಿಕಾರಿಗಳು ಬಂಧಿಸಿದ್ದರು.

ಇದನ್ನೂ ಓದಿ : ಬೆಂಗಳೂರು- ಹುಬ್ಬಳ್ಳಿ ಫ್ಲೈ-91 ವಿಮಾನದಲ್ಲಿ ಮತ್ತೆ ತಾಂತ್ರಿಕ ದೋಷ – 2 ಗಂಟೆ ಆಕಾಶದಲ್ಲೇ ಸುತ್ತಾಟ!

Btv Kannada
Author: Btv Kannada

Leave a Comment

Read More

Read More