ನಟನಾಗಿ ಕನ್ನಡಿಗರ ಮನ ಗೆದ್ದಿರುವ ಗೋಲ್ಡನ್ ಸ್ಟಾರ್ ನಾಯಕರಾಗಿ ನಟಿಸಿದ್ದ ಮೊದಲ ಚಿತ್ರ “ಚೆಲ್ಲಾಟ” ಬಿಡುಗಡೆಯಾಗಿ ನಿನ್ನೆಗೆ (ಏ.21) ಇಪ್ಪತ್ತು ವರ್ಷಗಳಾಗಿದೆ. ಎಂ.ಡಿ.ಶ್ರೀಧರ್ ಈ ಚಿತ್ರವನ್ನು ನಿರ್ದೇಶಿಸಿದ್ದರು. ಈ ಮೂಲಕ ಗಣೇಶ್ ಅವರು ನಾಯಕರಾಗಿ ಚಿತ್ರರಂಗ ಪ್ರವೇಶಿಸಿ ಇಪ್ಪತ್ತು ವರ್ಷಗಳಾಗಿದೆ.

ಅದೇ ವರ್ಷ ಗಣೇಶ್ ಅಭಿನಯದ ಕನ್ನಡದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ “ಮುಂಗಾರು ಮಳೆ” ಸಹ ಬಿಡುಗಡೆಯಾಗಿ, ಭರ್ಜರಿ ಯಶಸ್ಸು ಕಂಡಿತ್ತು. ಆನಂತರ “ಗಾಳಿಪಟ”, ” ಚೆಲುವಿನ ಚಿತ್ತಾರ”, “ಕೃಷ್ಣ” ದಿಂದ ಹಿಡಿದು ಇತ್ತೀಚೆಗೆ ತೆರೆಕಂಡ “ಕೃಷ್ಣಂ ಪ್ರಣಯ ಸಖಿ”ವರೆಗೂ ಸಾಕಷ್ಟು ಹಿಟ್ ಚಿತ್ರಗಳ ಮೂಲಕ ಅಭಿಮಾನಿಗಳನ್ನು ಗಣೇಶ್ ತಮ್ಮ ಅಮೋಘ ಅಭಿನಯದಿಂದ ರಂಜಿಸಿದ್ದಾರೆ.

ಗಣೇಶ್ ನಾಯಕರಾಗಿ ಇಪ್ಪತ್ತು ವರ್ಷಗಳು ಪೂರೈಸಿರುವ ಈ ಸಂದರ್ಭದಲ್ಲಿ ಅವರ ಅಭಿಮಾನಿಗಳು ಮೆಚ್ಚಿನ ನಾಯಕನಿಗೆ ವಿಶೇಷ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಇದನ್ನೂ ಓದಿ : ಅಸಭ್ಯ ವರ್ತನೆ ಕಾಂಗ್ರೆಸ್ನ ಸಿದ್ಧಾಂತ – ಪ್ರಹ್ಲಾದ್ ಜೋಶಿ!
Author: Btv Kannada
Post Views: 125









