ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – 7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ!

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ ಪ್ರಕಟಗೊಂಡಿದ್ದು, ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಶೇ.94.10 ರಷ್ಟು ಫಲಿತಾಂಶ ಪ್ರಕಟವಾಗಿದೆ. 

ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. 98.40% ಉತ್ತೀರ್ಣ ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ‌ ಸ್ಥಾನ ಪಡೆದಿದೆ.

ರಾಜ್ಯದಲ್ಲಿ 7 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ಮೊದಲ ರ್ಯಾಂಕ್ ಪಡೆದುಕೊಂಡಿದ್ದಾರೆ. ಚಿಕ್ಕೋಡಿಯ ಕಟಗೇರಿ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ನಾಗಪ್ಪ, ದಾವಣಗೆರೆಯ ಕಬ್ಬಳ ಗ್ರಾಮದ ಶ್ರೀ ವಿದ್ಯಾಲಕ್ಷ್ಮೀ ಕಾನ್ವೆಂಟ್ ಸ್ಕೂಲ್ ವಿದ್ಯಾರ್ಥಿ ಭರತ್, ಚಿಕ್ಕಮಗಳೂರು ಸೈಂಟ್ ಮೇರಿಸ್ ಹೈಸ್ಕೂಲ್​ ವಿದ್ಯಾರ್ಥಿನಿ ಬೃಂದ ಎಂ ತಾಪ್ಸೆ 625ಕ್ಕೆ 625 ಅಂಕ ಪಡೆದು ಉತ್ತೀರ್ಣರಾಗಿದ್ದಾರೆ.

ಇನ್ನು ಬೆಂಗಳೂರು ಉತ್ತರ ಪೂರ್ಣ ಪ್ರಜ್ಞಾ ಎಜುಕೇಶನಲ್ ಸೆಂಟರ್ ವಿದ್ಯಾರ್ಥಿ ಧನುಶ್ ಸುಧೀರ್, ಉಡುಪಿ ಮದರ್ ತೆರೇಸಾ ಮೆಮೋ ಸ್ಕೂಲ್​ ವಿದ್ಯಾರ್ಥಿ ಪ್ರೀತಮ್ ಜಿ ಪೂಜಾರಿ, ವಿಜಯಪುರ ಆಕ್ಸ್​ಫರ್ಡ್​ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ ವಿದ್ಯಾರ್ಥಿನಿ ಸೌಜನ್ಯ ಬಸವರಾಜ್ ಮತ್ತು ರಾಯಚೂರು ಬಿವಿಆರ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ ವಿದ್ಯಾರ್ಥಿ ಸುಕದೇವ 625ಕ್ಕೆ 625 ಅಂಕ ಪಡೆದು ಉತ್ತೀರ್ಣರಾಗಿದ್ದಾರೆ.

ಇದನ್ನೂ ಓದಿ : SSLC ಫಲಿತಾಂಶ ಪ್ರಕಟ – ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ದ್ವಿತೀಯ ಉಡುಪಿ!

Btv Kannada
Author: Btv Kannada

Leave a Comment

Read More